ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೊಮ್ಮಾಯಿ ಸಂಪುಟಕ್ಕೆ ಸರ್ಜರಿ : ಹಲವು ಸಚಿವರು ಕಿಕ್ ಔಟ್

ಬೆಂಗಳೂರು: ಮುಂದಿನ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಸಚಿವ ಸಂಪುಟ ಪುನಾರಚನೆ ಮಾಡಲು ಚಿಂತನೆ ನಡೆದಿದೆ ಎಂದು ಹುಬ್ಬಳ್ಳಿಯಲ್ಲಿ ನಡೆದ ಬಿಜೆಪಿ ಕಾರ್ಯಕಾರಣಿ ಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

2023ರ ಚುನಾವಣೆ ಗೆಲ್ಲುವ ಗುರಿಯೊಂದಿಗೆ ನಿಷ್ಕ್ರಿಯ ಸಚಿವರಿಗೆ ಗೇಟ್ ಪಾಸ್ ನೀಡಿ, ವರ್ಚಸ್ಸು ಹೆಚ್ಚಿಸುವ ಹೊಸ ಟೀಂ ಸೇರ್ಪಡೆ ಮಾಡಿಕೊಳ್ಳಲಾಗುವುದು. ಇದಕ್ಕಾಗಿ ಹೈಕಮಾಂಡ್ ಹಂತದಲ್ಲಿಯೇ ತೀರ್ಮಾನ ಕೈಗೊಂಡು ಸ್ಥಳೀಯರ ಗೊಂದಲಕ್ಕೆ ಕಡಿವಾಣ ಹಾಕಲಾಗುವುದು ಎನ್ನಲಾಗಿದೆ.

ಪ್ರಾದೇಶಿಕತೆ, ಜಾತಿವಾರು ಪ್ರಾತಿನಿಧ್ಯ ಪರಿಗಣಿಸಿ ಸಮತೋಲನ ಸಂಪುಟ ರಚನೆ ಮಾಡಲಾಗುತ್ತದೆ. ಸರ್ಕಾರದ ವರ್ಚಸ್ಸು ಹೆಚ್ಚಿಸುವ ಉತ್ಸಾಹಿಗಳಿಗೆ ಸಂಪುಟದಲ್ಲಿ ಅವಕಾಶ ನೀಡಲಾಗುತ್ತದೆ. ಮಾಜಿ ಸಿಎಂ ಯಡಿಯೂರಪ್ಪ ಪುತ್ರ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಸೇರ್ಪಡೆಯಾಗುವ ಸಾಧ್ಯತೆ ಹೆಚ್ಚಿದೆ.

Edited By : Nirmala Aralikatti
PublicNext

PublicNext

30/12/2021 09:50 am

Cinque Terre

28.72 K

Cinque Terre

2

ಸಂಬಂಧಿತ ಸುದ್ದಿ