ಮೈಸೂರು: ಮಾಜಿ ಸಿಎಂ ಕುಮಾರಸ್ವಾಮಿ ಅವರು ಒಳ್ಳೆಯ ಉದ್ದೇಶ ಹೊಂದಿಲ್ಲ. ಅವರದು ಜನಪರ ಉದ್ದೇಶವೇ ಇಲ್ಲ ಎಂದು ಮಾಜಿ ಸಂಸದ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ್ ಕಿಡಿಕಾರಿದ್ದಾರೆ.
ಮೇಕೆದಾಟು ಪಾದಯಾತ್ರೆ ವಿಚಾರವಾಗಿ ಕಾಂಗ್ರೆಸ್ ಪಕ್ಷ ಮಕ್ಮಲ್ ಟೋಪಿ ಹಾಕುತ್ತಿದೆ ಎಂದು ಕುಮಾರಸ್ವಾಮಿ ಟೀಕಿಸಿದ್ದರು. ಕುಮಾರಸ್ವಾಮಿ ಅವರ ಈ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಧ್ರುವನಾರಾಯಣ್, ಯಾರು ಯಾರಿಗೆ ಮಕ್ಮಲ್ ಟೋಪಿ ಹಾಕಿದ್ದಾರೆ? ಇದು ಕುಮಾರಸ್ವಾಮಿ ಅವರಿಗೆ ಗೊತ್ತಿದೆ. 20-20 ವೇಳೆ ಹಾಗೂ 2018ರಲ್ಲಿ ಕುಮಾರಸ್ವಾಮಿ ಅವರು ಮಕ್ಮಲ್ ಟೋಪಿ ಹಾಕಿದ್ದರು ಎಂದು ತಿರುಗೇಟು ನೀಡಿದ್ದಾರೆ.
ಜೆಡಿಎಸ್‌ನ ನಾಯಕರು ಕಾಂಗ್ರೆಸ್ ಕಡೆ ಬರುತ್ತಿದ್ದಾರೆ. ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಅವರನ್ನು ಹತಾಶರನ್ನಾಗಿಸಿದೆ. ಈ ಎಲ್ಲ ಹಿನ್ನಡೆಗಳಿಂದ ಕುಮಾರಸ್ವಾಮಿ ಅವರು ಹತಾಶರಾಗಿ ಈ ರೀತಿ ಮಾತನಾಡುತ್ತಿದ್ದಾರೆ. ಅವರ ಉದ್ದೇಶ ಒಳ್ಳೆಯದಾಗಿಲ್ಲ. ಜನಪರ ಉದ್ದೇಶ ಅವರಿಗಿಲ್ಲ. ಕೋಮುವಾದಿ ಪಕ್ಷವನ್ನು ದೂರ ಇಡಲು ನಾವು ಅವರಿಗೆ ಅವಕಾಶ ಕೊಟ್ಟಿದ್ದೇವೆ. ಕಾಂಗ್ರೆಸ್ ಪಕ್ಷ ಯಾವತ್ತು ಅನ್ಯಾಯ ಮಾಡಿಲ್ಲ. ಸಮ್ಮಿಶ್ರ ಸರ್ಕಾರದ ನಂತರವೂ ಪ್ರಧಾನಿ ದೇವೇಗೌಡರಿಗೆ ಬೆಂಬಲ ನೀಡಿದ್ದೇವೆ. ಆದರೂ ಜೆಡಿಎಸ್ ಅವಕಾಶವಾದಿ ರಾಜಕಾರಣ ಮಾಡುತ್ತಿದೆ ಎಂದು ವಿರೋಧ ವ್ಯಕ್ತಪಡಿಸಿದ್ದಾರೆ.
PublicNext
31/12/2021 05:35 pm