ನವದೆಹಲಿ: ಕೊರೊನಾ,ಒಮಿಕ್ರಾನ್, ಅತಿವೃಷ್ಟಿ, ಭೂಕಂಪ ಹೀಗೆ ಹತ್ತು ಹಲವು ಸಮಸ್ಯೆಗಳ ಮಧ್ಯೆ ಹೊಸ ವರ್ಷಕ್ಕೆ ಕಾಲಿಟ್ಟಿದ್ದೇವೆ.
ನೂತನ ವರ್ಷಕ್ಕೆ ಕಾಲಿಟ್ಟ ದೇಶದ ಸಮಸ್ತ ಜನರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಅನೇಕ ಗಣ್ಯರು ಹೊಸ ವರ್ಷದ ಶುಭಾಶಯ ಕೋರಿದ್ದಾರೆ.
ಟ್ವಿಟರ್ ನಲ್ಲಿ ಪ್ರಧಾನಿ ಮೋದಿ 2022ರ ಹೊಸ ವರ್ಷದ ಶುಭಾಶಯಗಳು! ಈ ವರ್ಷ ಪ್ರತಿಯೊಬ್ಬರ ಜೀವನದಲ್ಲಿ ಸಂತೋಷ ಮತ್ತು ಉತ್ತಮ ಆರೋಗ್ಯವನ್ನು ತರಲಿ. ನಾವು ಪ್ರಗತಿ ಮತ್ತು ಸಮೃದ್ಧಿಯ ಹೊಸ ಉತ್ತುಂಗವನ್ನು ಏರುತ್ತಲೇ ಇರೋಣ ಮತ್ತು ನಮ್ಮ ಸ್ವಾತಂತ್ರ್ಯ ಹೋರಾಟಗಾರರ ಕನಸುಗಳನ್ನು ನನಸಾಗಿಸಲು ಇನ್ನಷ್ಟು ಶ್ರಮಿಸೋಣ ಎಂದು ಹೇಳಿದ್ದಾರೆ.
ಮುಖ್ಯಮಂತ್ರಿ ಬೊಮ್ಮಾಯಿ ನಾಡಿನ ಸಮಸ್ತ ಜನತೆಗೆ 2022ರ ಹೊಸ ವರ್ಷದ ಹೃತ್ಪೂರ್ವಕ ಶುಭಾಶಯಗಳು. ನವ ವರ್ಷ ಎಲ್ಲರಿಗೂ ಸುಖ-ಸಂತಸಗಳನ್ನು ಹೊತ್ತು ತರಲಿ. ಜನರ ಆರೋಗ್ಯದ ದೃಷ್ಟಿಯಿಂದ ಬಹಿರಂಗ ಸಂಭ್ರಮಾಚರಣೆಗಳಿಂದ ದೂರವಿದ್ದು, ಸಾಂಕ್ರಾಮಿಕದ ಸವಾಲುಗಳನ್ನು ನಾವೆಲ್ಲರೂ ಕೂಡಿ ಎದುರಿಸೋಣ, ಸುರಕ್ಷತಾ ನಿಯಮಗಳನ್ನು ತಪ್ಪದೇ ಪಾಲಿಸಿ ಕೊರೊನಾ ಮಣಿಸೋಣ ಎಂದು ತಿಳಿಸಿದ್ದಾರೆ.
ಇದರಂತೆ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಕೇಂದ್ರ ಸಚಿವರಾದ ಪಿಯೂಷ್ ಗೋಯಲ್, ನಿತಿನ್ ಗಡ್ಕರಿ ಸೇರಿದಂತೆ ಹಲವು ಗಣ್ಯರು ಕೂಡ ದೇಶದ ಜನತೆಗೆ ಹೊಸ ವರ್ಷದ ಶುಭಾಶಯಗಳನ್ನು ಕೋರಿದ್ದಾರೆ.
PublicNext
01/01/2022 09:46 am