ಶಿವಮೊಗ್ಗ: ನಿರಂತರ ಜ್ಯೋತಿ ವಿದ್ಯುತ್ ಯೋಜನೆಯಲ್ಲಿ ಭಾರೀ ಅಕ್ರಮ ನಡೆದಿದೆ ಎಂದು ಇಂಧನ ಸಚಿವ ಸುನಿಲ್ ಕುಮಾರ್ ಆರೋಪಿಸಿದ್ದಾರೆ.
ಶಿವಮೊಗ್ಗದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಿರಂತರ ಜ್ಯೋತಿ ವಿದ್ಯುತ್ ಯೋಜನೆ ಕುರಿತಂತೆ ನಡೆದ ಸಭೆಯಲ್ಲಿ ಮಾತನಾಡಿದ ಇಂಧನ ಸಚಿವ ಸುನಿಲ್‌ಕುಮಾರ್ "ಈ ಅಕ್ರಮ, ಭ್ರಷ್ಟಾಚಾರದಲ್ಲಿ ಹಲವಾರು ಅಧಿಕಾರಿಗಳೂ ಭಾಗಿಯಾಗಿದ್ದೂ 224 ಕೋಟಿ ರೂ. ವೆಚ್ಚದ ಕಾಮಗಾರಿಗಳಲ್ಲಿ ಲೋಪವಾಗಿದೆ. ಟೆಂಡರ್ ಪ್ರಕಾರ ಯಾವುದೇ ಕಾಮಗಾರಿ ನಡೆದಿಲ್ಲ. ಕಾರ್ಮಿಕ ನಿಯಮಾವಳಿ ಪಾಲಿಸಿಲ್ಲ. ಸರ್ಕಾರದ ನಿರ್ದೇಶನದಂತೆ ಈ ಯೋಜನೆ ಅನುಷ್ಠಾನವಾಗಿಲ್ಲ" ಎಂದು ಸುನಿಲ್ ಕುಮಾರ್ ಮಾಹಿತಿ ನೀಡಿದ್ದಾರೆ.
ಇನ್ನು ಈ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಅಧ್ಯಕ್ಷತೆಯಲ್ಲಿ ಸಭೆ ನಡೆಯುತ್ತಿದ್ದು ಸಭೆಯಲ್ಲಿ ಶಾಸಕರಾದ ಆಯನೂರು ಮಂಜುನಾಥ್, ರುದ್ರೆಗೌಡ, ಅಶೋಕ್ ನಾಯ್ಕ್, ಮೇಯರ್ ಸುನಿತಾ ಅಣ್ಣಪ್ಪ ಸೇರಿದಂತೆ ಮೆಸ್ಕಾಂ ಅಧಿಕಾರಿಗಳು ಭಾಗಿಯಾಗಿದ್ದಾರೆ.
PublicNext
01/01/2022 04:43 pm