ರಾಮನಗರ: ಸರ್ಕಾರದ ಕಾರ್ಯಕ್ರಮವೊಂದರಲ್ಲಿ ಸಚಿವ ಮತ್ತು ಸಂಸದರು ಪರಸ್ಪರ ಬಡಿದಾಡಿಕೊಳ್ಳುವ ಹಂತಕ್ಕೆ ಹೋದ ಘಟನೆ ಇಂದು ರಾಮನಗರದಲ್ಲಿ ನಡೆದಿದೆ.
ಇಲ್ಲಿನ ಜಿಲ್ಲಾ ಕಚೇರಿಗಳ ಸಂಕೀರ್ಣದ ಮುಂಭಾಗ ಸೋಮವಾರ ನಡೆದ ಪ್ರತಿಮೆಗಳ ಅನಾವರಣ ಹಾಗೂ ವಿವಿಧ ಕಾಮಗಾರಿಗಳಿಗೆ ಚಾಲನೆ ಕಾರ್ಯಕ್ರಮದ ವೇದಿಕೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎದುರೇ ಸಚಿವ ಸಿ.ಎನ್. ಅಶ್ವತ್ಥನಾರಾಯಣ ಹಾಗೂ ಸಂಸದ ಡಿ.ಕೆ. ಸುರೇಶ್ ಹೊಡೆದಾಟಕ್ಕೆ ಮುಂದಾದ ಪ್ರಸಂಗ ನಡೆಯಿತು.
ಅಶ್ವತ್ಥನಾರಾಯಣರ ಮಾತಿನಿಂದ ಕೆರಳಿದ ಸುರೇಶ್ ಅವರತ್ತ ನುಗ್ಗಿದರು. ಅತ್ತ ಅಶ್ವತ್ಥನಾರಾಯಣ ಸಹ ಕೆರಳಿದರು. ನಂತರ ಇಬ್ಬರು ಕೈ ಕೈ ಮಿಲಾಯಿಸಲು ಮುಂದಾದರು. ಕಾಂಗ್ರೆಸ್ ನವಿಧಾನ ಪರಿಷತ್ ಸದಸ್ಯ ರವಿ ಮೈಕ್ ಕಿತ್ತೆಸೆದರು. ಇದರಿಂದ ಪರಿಸ್ಥಿತಿ ಇನ್ನಷ್ಟು ವಿಕೋಪಕ್ಕೆ ಹೋಯಿತು.
ಇದೇ ವೇಳೆ ಸಂಸದ ಡಿ.ಕೆ. ಸುರೇಶ್ ವೇದಿಕೆಯಲ್ಲೇ ಧರಣಿ ಕುಳಿತರು.
ಇದೇ ನೋಡಿ ಕಿಡಿ ಹೊತ್ತಿಸಿದ ಭಾಷಣ : ಕಾರ್ಯಕ್ರಮಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಅಡ್ಡಿಪಡಿಸಿದ್ದನ್ನು ತಮ್ಮ ಭಾಷಣದಲ್ಲಿ ಪ್ರಸ್ತಾಪಿಸಿದ ಸಚಿವ ಅಶ್ವತ್ಥನಾರಾಯಣ ' ಇವತ್ತು ಏನು ತಪ್ಪಾಗಿದೆ ಎಂದು ನಾಲ್ಕು ಜನರನ್ನು ಸೇರಿಸಿ ಘೋಷಣೆ ಕೂಗುತ್ತೀರಿ. ನಾನೇನು ಯಾರ ಜಮೀನಿಗೂ ಕೈ ಹಾಕಿಲ್ಲ. ಯಾವನೋ ಅವನು ಗಂಡಸು ಅನ್ನೋನು' ಎಂದು ಪ್ರಚೋದಿಸಿದರು.
ಇದರಿಂದ ಕುಪಿತಗೊಂಡ ಸುರೇಶ್ ' ನನ್ನ ಗಂಡಸ್ಥನ ತೋರಿಸಲ' ಎಂದು ಅಶ್ವತ್ಥನಾರಾಯಣರತ್ತ ನುಗ್ಗಿದರು.
PublicNext
03/01/2022 02:30 pm