ಚಾಮರಾಜನಗರ: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಹೋಗಿ ಬಂದಲ್ಲೆಲ್ಲ 'ಮುಂದಿನ ಸಿಎಂ ಸಿದ್ದರಾಮಯ್ಯ' ಎಂಬ ಘೋಷಣೆಗಳು ಕೇಳಿ ಬರುತ್ತಿವೆ. ಈ ಮೂಲಕ ಕಾಂಗ್ರೆಸ್‌ನಲ್ಲಿ ಮುಂದಿನ ಸಿಎಂ ಅಭ್ಯರ್ಥಿ ಯಾರು? ಎಂಬ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ.
ಭಾನುವಾರ ಡಿ.ಕೆ.ಶಿವಕುಮಾರ್ ಎದುರೇ ಸಿದ್ದರಾಮಯ್ಯ ಬೆಂಬಲಿಗರು ‘ಬಾಸ್ ಬಾಸ್ ಸಿದ್ದು ಬಾಸ್’, ‘ಮುಂದಿನ ಸಿಎಂ ಸಿದ್ದರಾಮಯ್ಯನವರಿಗೆ ಜೈ’ ಎಂದು ಘೋಷಣೆ ಕೂಗಿದ್ದಾರೆ.
ಮೇಕೆದಾಟು ಪಾದಯಾತ್ರೆಯ ಪೂರ್ವಭಾವಿ ಸಭೆಗೆ ಭಾನುವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ವಿಪಕ್ಷ ನಾಯಕ ಸಿದ್ದರಾಮಯ್ಯ ಚಾಮರಾಜನಗರಕ್ಕೆ ಬಂದಿದ್ದರು. ಚಾಮರಾಜೇಶ್ವರ ದೇವಾಲಯದ ಪ್ರಾಂಗಣದಲ್ಲಿ ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲೇ ಸಿದ್ದರಾಮಯ್ಯನವರ ಬೆಂಬಲಿಗರು, ಮುಂದಿನ ಸಿಎಂ ಸಿದ್ದರಾಮಯ್ಯ ಎಂದು ಘೋಷಣೆ ಕೂಗಿದರು. ಅಷ್ಟೇ ಅಲ್ಲದೆ ಡಿ.ಕೆ.ಶಿವಕುಮಾರ್ ದೇವಾಲಯ ಪ್ರದಕ್ಷಿಣೆ ಹಾಕುವಾಗಲೂ ಸಿದ್ದರಾಮಯ್ಯ ಅಭಿಮಾನಿಗಳು ನೃತ್ಯ ಮಾಡಿ, ಮುಂದಿನ ಸಿಎಂ ಸಿದ್ದರಾಮಯ್ಯ ಎಂದು ಕೂಗಿದರು. ಸಿದ್ದರಾಮಯ್ಯ ಸಿಎಂ ಆಗಬೇಕೆಂದೇ ಪೂಜೆ ಸಲ್ಲಿಸಬೇಕೆಂದು ಅಭಿಮಾನಿಗಳು ಒತ್ತಾಯಿಸಿದ ಘಟನೆಯೂ ನಡೆದಿದೆ.
PublicNext
03/01/2022 03:43 pm