ವಿಜಯಪುರ: ಕಾಂಗ್ರೆಸ್ ನವರು ಮೇಕೆದಾಟು ಯೋಜನೆ ಜಾರಿಗೆ ತರಬೇಕು ಅಂತ ಪಾದಯಾತ್ರೆ ಮಾಡ್ತಿದ್ದಾರೆ. ಸಿನಿಮಾ ಶೂಟಿಂಗ್ ಗೆ ಹೋದಂತೆ ಈ ಪಾದಯಾತ್ರೆಗೆ ಕಾಂಗ್ರೆಸ್‌ನವರು ಹೋಗ್ತಾಯಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ.
ವಿಜಯಪುರದಲ್ಲಿ ಇಂದು ಮಾತನಾಡಿ ಇವ್ರು,ಕಾಂಗ್ರೆಸ್ ನವರು ಸುಮ್ನೆನೆ ಪಾದಯಾತ್ರೆ ಮಾಡ್ತಿದ್ದಾರೆ. ವಿಧಾನಸಭಾ ಚುನಾವಣೆಗೆ ಇನ್ನೂ ಒಂದು ವರ್ಷ ಬಾಕಿ ಇದೆ. ಆಗಲೇ ಕಾಂಗ್ರೆಸ್ ನವರು ಪಾದಯಾತ್ರೆಯ ನಾಟಕ ಮಾಡ್ತಿದ್ದಾರೆ ಅಂತಲೇ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯನವರನ್ನ ಬಸವನಗೌಡ ಪಾಟೀಲ್ ಯತ್ನಾಳ್ ಟೀಕಿಸಿದ್ದಾರೆ.
2013 ರಲ್ಲಿ ಅಧಿಕಾರಕ್ಕೆ ಬರುವಾಗ ಸಿದ್ದರಾಮಯ್ಯ ಕಾಂಗ್ರೆಸ್ ಕೃಷ್ಣಾ ಭಾಗ್ಯ ಜಲ ನಿಗಮ ಯೋಜನೆಗೆ ವರ್ಷಕ್ಕೆ ಹತ್ತು ಸಾವಿರ ಕೋಟಿ ರೂಪಾಯಿ ನೀಡುವುದಾಗಿ ಭರವಸೆ ನೀಡಿದ್ದರು. ಈ ಕುರಿತು ಕೂಡಲಸಂಗಮದಲ್ಲಿ ಆಣೆ ಪ್ರಮಾಣ ಕೂಡ ಮಾಡಿದ್ದರು.
ಆದರೆ ಕೆಬಿಜೆಎನ್ಎಲ್ ಗೆ ಕೊಟ್ಟಿದ್ದು ಎಷ್ಟು..? ಎಂದು ಬಸನಗೌಡ ಪಾಟೀಲ್ ಯತ್ನಾಳ್ ಪ್ರಶ್ನಿಸಿದ್ದಾರೆ.
PublicNext
03/01/2022 04:09 pm