ರಾಮನಗರ: ರಾಮನಗರ ಜಿಲ್ಲಾಡಳಿತದಿಂದ ಡಿಸಿ ಕಚೇರಿ ಆವರಣದಲ್ಲಿ ನಿರ್ಮಿಸಿರುವ ಡಾ. ಬಿ ಆರ್ ಅಂಬೇಡ್ಕರ್ ಮತ್ತು ಕೆಂಪೇಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಸಮ್ಮುಖದಲ್ಲೇ ಸಚಿವ ಡಾ. ಸಿಎನ್ ಅಶ್ವತ್ಥ ನಾರಾಯಣ ಹಾಗೂ ಸಂಸದ ಡಿ.ಕೆ ಸುರೇಶ್ ವೇದಿಕೆಯಲ್ಲೇ ಕೈ ಕೈ ಮಿಲಾಯಿಸಿದ ಘಟನೆ ನಡೆಯಿತು.
ಕಾರ್ಯಕ್ರಮದಲ್ಲಿ ಸಚಿವ ಡಾ. ಅಶ್ವತ್ಥ ನಾರಾಯಣ ಮಾತನಾಡುವ ಸಂದರ್ಭದಲ್ಲಿ ಉಪಯೋಗಿಸಿದ ಒಂದು ಪದ ಡಿಕೆ ಸುರೇಶ್ ಆಕ್ರೋಶಕ್ಕೆ ಕಾರಣವಾಯಿತು. ಅಶ್ವತ್ಥ ನಾರಾಯಣ ವಿರುದ್ಧ ರೊಚ್ಚಿಗೆದ್ದ ಡಿಕೆ ಸುರೇಶ್ ಅವರು ಮಾತನಾಡುತ್ತಿದ್ದ ಪೋಡಿಯಂ ಕಡೆ ಆಕ್ರೋಶದಿಂದ ಬಂದರು.
ಈ ಸಂದರ್ಭದಲ್ಲಿ ಸಚಿವ ಅಶ್ವತ್ಥ ನಾರಾಯಣ ಕೂಡಾ ಮುಂದೆ ಬಂದರು. ಇಬ್ಬರು ಪರಸ್ವರ ಏರು ಧ್ವನಿಯಲ್ಲಿ ವಾಗ್ದಾದ ನಡೆಸಿ ಕೈಕೈ ಮಿಲಾಯಿಸುವ ಹಂತಕ್ಕೂ ತಲುಪಿತು. ಇದೇ ಸಂದರ್ಭದಲ್ಲಿ ಎಂಎಲ್ ಸಿ ರವಿ ಅವರು ಅಶ್ವತ್ಥ ನಾರಾಯಣ ಮಾತನಾಡುತ್ತಿದ್ದ ಮೈಕ್ ನ್ನು ಕಿತ್ತು ಎಸೆದರು. ಕೂಡಲೇ ಪೊಲೀಸರು ಮಧ್ಯಪ್ರವೇಶ ಮಾಡಿ ಪರಿಸ್ಥಿತಿಯನ್ನು ನಿಯಂತ್ರಣ ಮಾಡಿದರು.
PublicNext
03/01/2022 05:09 pm