ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶ್ರೀಕೃಷ್ಣ ನನ್ನ ಕನಸಿನಲ್ಲಿ ಬಂದು ನಮ್ಮ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದಿದ್ದಾರೆ: ಅಖಿಲೇಶ್ ಯಾದವ್

ಲಖನೌ: 'ಭಗವಾನ್ ಶ್ರೀಕೃಷ್ಣ ನನ್ನ ಕನಸಿನಲ್ಲಿಯೂ ಬರುತ್ತಾರೆ. ಈ ಬಾರಿ ಉತ್ತರ ಪ್ರದೇಶದಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದಿದ್ದಾರೆ' ಎಂದು ಸಮಾಜವಾದಿ ಪಕ್ಷದ ನಾಯಕ ಹಾಗೂ ಉತ್ತರ ಪ್ರದೇಶದ ಮಾಜಿ ಸಿಎಂ ಅಖಿಲೇಶ್ ಯಾದವ್ ಹೇಳಿದ್ದಾರೆ.

ಬಿಜೆಪಿ ರಾಜ್ಯಸಭಾ ಸದಸ್ಯ ಹರನಾಥ್ ಸಿಂಗ್ ಯಾದವ್, ಶ್ರೀಕೃಷ್ಣ ನನ್ನ ಕನಸಿನಲ್ಲಿ ಬಂದು ಯೋಗಿ ಆದಿತ್ಯನಾಥ್ ಅವರನ್ನು ನನ್ನ ಜನ್ಮಭೂಮಿ ಮಥುರಾದಿಂದ ಚುನಾವಣೆಗೆ ಸ್ಪರ್ಧಿಸುವಂತೆ ಕೇಳಿಕೊಂಡರು ಎಂದು ಇತ್ತೀಚೆಗಷ್ಟೇ ಹೇಳಿದ್ದರು. ಅವರ ಈ ಹೇಳಿಕೆ ಬಗ್ಗೆ ಸೋಮವಾರ ಮಾಧ್ಯಮಗೋಷ್ಟಿಯಲ್ಲಿ ಅಖಿಲೇಶ್ ಅವರನ್ನು ಕೇಳಿದಾಗ 'ಶ್ರೀಕೃಷ್ಣ ಜೀ ಅವರು ಕನಸಿನಲ್ಲಿಯೂ ಬರುತ್ತಾರೆ. ಬಂದು ನಿಮ್ಮ ಸರ್ಕಾರ ರಚನೆಯಾಗಲಿದೆ ಎಂದು ಹೇಳಿದರು ಎಂದು ಅಖಿಲೇಶ್ ಉತ್ತರಿಸಿದ್ದಾರೆ.

ಇನ್ನು ಬಿಜೆಪಿಯ ಜನ ವಿಶ್ವಾಸ ಯಾತ್ರೆಗೆ ವ್ಯಂಗ್ಯವಾಡಿದ ಅಖಿಲೇಶ್, ನಾನು ಹಲವು ಸ್ಥಳಗಳ ಚಿತ್ರವನ್ನು ನೋಡಿದ್ದೇನೆ. ಬಿಜೆಪಿಯ ಜನ ವಿಶ್ವಾಸ ಯಾತ್ರೆಗಿಂತ ಚೌಮೇನ್ ಗಾಡಿಗಳು ಹೆಚ್ಚು ಜನಸಂದಣಿಯಿಂದ ಕೂಡಿವೆ ಎಂದು ಟೀಕಿಸಿದ್ದಾರೆ.

Edited By : Nagaraj Tulugeri
PublicNext

PublicNext

04/01/2022 08:05 am

Cinque Terre

178.24 K

Cinque Terre

45

ಸಂಬಂಧಿತ ಸುದ್ದಿ