ಗಂಗಾವತಿ: (ಕೊಪ್ಪಳ ಜಿಲ್ಲೆ) ಮುಖ್ಯಮಂತ್ರಿ ಬದಲಾವಣೆ ಕೇವಲ ಕಪೋಲ ಕಲ್ಪಿತ. ಅಂತಹ ಯಾವುದೇ ಚಿಂತನೆ ಇಲ್ಲ ಎಂದು ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
ಕೊಪ್ಪಳ ಜಿಲ್ಲೆ ಗಂಗಾವತಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಪೋಲ ಕಲ್ಪಿತವಾಗಿ ಇಂತಹ ವಿಚಾರಗಳು ಹೊರಬರುತ್ತಿವೆ. ಮುಖ್ಯಮಂತ್ರಿ ಬದಲಾವಣೆ ವಿಚಾರ ಯಾರೂ ಕೂಡ ಮಾತಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಕಾಂಗ್ರೆಸ್ ಅಲ್ಪ ಸಂಖ್ಯಾತರ ಓಲೈಕೆ ಮಾಡುತ್ತಿದೆ. ಹಿಂದೂಗಳ ಅಭಿವೃದ್ಧಿ ಬಗ್ಗೆ ಕಾಂಗ್ರೆಸ್ ಯಾವತ್ತೂ ಚಿಂತನೆ ಮಾಡಿಲ್ಲ. ಹಿಂದೂಗಳ ಬಗ್ಗೆ ಆಲೋಚನೆ ಮಾಡೋದು ಭಾರತೀಯ ಜನತಾ ಪಾರ್ಟಿ ಮಾತ್ರ. ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗೆ ಮುಖ್ಯಮಂತ್ರಿಗಳು ಹಣ ಕೊಡ್ತೀನಿ ಎಂದಿದ್ದಾರೆ. ನಮ್ಮ ಸರ್ಕಾರದ ಅವಧಿಯಲ್ಲಿ ಅಂಜನಾದ್ರಿ ಅಭಿವೃದ್ಧಿಯಾಗಲಿದೆ ಎಂದು ವಿಜಯೇಂದ್ರ ಇದೇ ಸಂದರ್ಭದಲ್ಲಿ ಹೇಳಿದರು.
PublicNext
04/01/2022 10:43 am