ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ತಾರಕಕ್ಕೇರಿದ ನಾಯಕ ವೇದಿಕೆ : ಡಿ. ಕೆ. ಸುರೇಶ್ ಗೆ ಸಿ. ಟಿ. ರವಿ ಥ್ಯಾಂಕ್ಸ್!

ಬೆಂಗಳೂರು : ರಾಮನಗರದಲ್ಲಿ ಕಾರ್ಯಕ್ರಮವೊಂದರಲ್ಲಿ ವೇದಿಕೆ ಮೇಲೆ ಸಿಎಂ ಮುಂದೆಯೇ ಸಂಸದ ಡಿ.ಕೆ.ಸುರೇಶ್ ಹಾಗೂ ಸಚಿವ ಅಶ್ವತ್ಥ ನಾರಾಯಣ ಮಧ್ಯೆ ಗಲಾಟೆ ಉಂಟಾಗಿರುವುದು ಎಲ್ಲರಿಗೂ ತಿಳಿದಿದೆ.

ಸದ್ಯ ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಸಿ. ಟಿ. ರವಿ ರಾಮನಗರದಲ್ಲಿ ನಡೆದ ಘಟನೆ ಕಾಂಗ್ರೆಸ್ ಸಂಸ್ಕೃತಿಯನ್ನು ರಾಜ್ಯದ ಜನರಿಗೆ ಪರಿಚಯಿಸಿದೆ ದ ಸಂಸದ ಡಿ.ಕೆ. ಸುರೇಶ್ ರವರಿಗೆ ಧನ್ಯವಾದ" ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿ ಹೇಳಿದ್ದಾರೆ.

ಈ ಕುರಿತು ಫೇಸ್ ಬುಕ್ ಪೋಸ್ಟ್ ಹಾಕಿದ ಸಿಟಿ ರವಿ "ಇಂದಿನ ಯುವಜನತೆ Indian National Congress ದ ಸಂಸ್ಕೃತಿ ಅಂದರೆ ಭ್ರಷ್ಟಾಚಾರ, ಹೊಣೆಗೇಡಿತನ ಅಂದುಕೊಂಡಿದ್ದರು, ರೌಡಿಸಂ ಕೂಡಾ ಅದರ ಅವಿಭಾಜ್ಯ ಅಂಗ ಅನ್ನುವುದು ಈಗ ಜಗಜ್ಜಾಹೀರಾಗಿದೆ" ಎಂದು ಟೀಕಿಸಿದ್ದಾರೆ.

"ಮುಜುಗರವಿಲ್ಲದೆ ಈ "ರಿಪಬ್ಲಿಕ್ ಆಫ್ ರೌಡಿಸಂ" ಅನ್ನು ಸಮರ್ಥಿಸಿಕ್ಕೊಳ್ಳುವ ವ್ಯಕ್ತಿಗಳು ಕೂಡಾ ಕಾಂಗ್ರೆಸ್ ಸಂಸ್ಕೃತಿಯ ಪಾಲುದಾರರು. ನಮ್ಮ ರಕ್ತವೇ ಬೇರೆ ಅನ್ನುವ ಕೆಪಿಸಿಸಿ ಅಧ್ಯಕ್ಷರೇ, ನಿಮ್ಮ ರಕ್ತದ ಮಾದರಿ ಪರೀಕ್ಷೆಗೆ ಸಮಯ ವ್ಯಯ ಮಾಡಬೇಡಿ. ನಿಮ್ಮ ರಕ್ತದ ಗುಣ ನಿನ್ನೆ ನಿಮ್ಮ ಸಹೋದರ ಸಾರ್ವಜನಿಕವಾಗಿ ತೋರಿಸಿದ್ದಾರೆ. ನಿನ್ನೆಯೇ ಅದರ ಪರೀಕ್ಷೆ ಮತ್ತು ಫಲಿತಾಂಶ ರಾಜ್ಯದ ಜನತೆಗೆ ಸಿಕ್ಕಿದೆ" ಎಂದು ಟಾಂಗ್ ನೀಡಿದ್ದಾರೆ.

ರಾಮನಗರದಲ್ಲಿ ನಡೆದ ಗಲಾಟೆ ಪ್ರಕರಣದ ಬಗ್ಗೆ ಕರ್ನಾಟಕ ಬಿಜೆಪಿ ಸರಣಿ ಟ್ವೀಟ್ ಮಾಡಿದೆ. ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದೆ. ಇಂದು ರಾಜ್ಯಾದ್ಯಂತ ಡಿ. ಕೆ. ಸುರೇಶ್ ವರ್ತನೆ ಖಂಡಿಸಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ.

Edited By : Nirmala Aralikatti
PublicNext

PublicNext

04/01/2022 06:45 pm

Cinque Terre

77.35 K

Cinque Terre

4

ಸಂಬಂಧಿತ ಸುದ್ದಿ