ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂತ್ರಿ ಕಾಲಿಗೆ ಬಿದ್ದ IAS ಅಧಿಕಾರಿ : ವ್ಯಾಪಕ ಟೀಕೆ

ಹೈದರಾಬಾದ್ : ಪುರಸಭೆ ಮತ್ತು ನಗರಾಭಿವೃದ್ಧಿ ಸಚಿವ ಬೊತ್ಸ ಸತ್ಯನಾರಾಯಣ ಮತ್ತು ಅವರ ಪತ್ನಿಗೆ ಹೂಗುಚ್ಛವನ್ನು ನೀಡಿದ ತೆರಿಗೆ ಇಲಾಖೆಯ ಅಧಿಕಾರಿ ಕಿಶೋರ್ ಕುಮಾರ್ ಇಬ್ಬರ ಕಾಲು ಮುಟ್ಟಿ ನಮಸ್ಕರಿಸಿರುವುದು ವ್ಯಾಪಕ ಟೀಕೆಗೆ ಗುರಿಯಾಗಿದೆ.

ಹೌದು ಆಂಧ್ರ ಪ್ರದೇಶದ ವಿಜಯನಗರಂನಲ್ಲಿ ಜನವರಿ 1ರಂದು ಈ ಘಟನೆ ನಡೆದಿದ್ದು, ವಿಡಿಯೋ ವ್ಯಾಪಕವಾಗಿ ಹಂಚಿಕೆ ಆಗಿದೆ. ಅಧಿಕಾರಿ ಮತ್ತು ರಾಜಕಾರಣಿಗಳ ನಡೆಯ ಬಗ್ಗೆ ಸಾಮಾಜಿಕ ತಾಣಗಳಲ್ಲಿ ವ್ಯಾಪಕ ಟೀಕೆ ವ್ಯಕ್ತವಾಗಿದೆ.

'ಹೊರಗೆ ಬಿಂಬಿತಗೊಂಡಿರುವಂತೆ ಏನೂ ನಡೆದಿಲ್ಲ. ಈ ಬಗ್ಗೆ ಸಚಿವರು ಪ್ರತಿಕ್ರಿಯಿಸಿದ್ದಾರೆ. ನನ್ನ ವೃತ್ತಿಗೆ ರಾಜೀನಾಮೆ ಕೊಟ್ಟು, ಶಾಸಕನಾಗುವ ಆಸೆ ಇಲ್ಲ' ಎಂದು ಕಿಶೋರ್ ಕುಮಾರ್ ಹೇಳಿದ್ದಾರೆ.

'ಐಎಎಸ್ ಅಧಿಕಾರಿಯೊಬ್ಬರು ರಾಜಕಾರಣಿಯ ಕಾಲಿಗೆ ಬೀಳುವುದು ನಾಚಿಕೆಗೇಡು. ಇದನ್ನು ಖಂಡಿಸಲು ಐಎಎಸ್ ಅಧಿಕಾರಿಗಳ ಒಕ್ಕೂಟಕ್ಕೆ ಇದು ಸೂಕ್ತ ಸಮಯವಲ್ಲವೇ? ಏಕೆ ಬಾಯಿ ಮುಚ್ಚಿಕೊಂಡಿದ್ದಾರೆ?' ಎಂದು ಟಿಡಿಪಿ ಮುಖಂಡ ವರ್ಲ ರಾಮಯ್ಯ ಪ್ರಶ್ನಿಸಿದ್ದಾರೆ.

Edited By : Nirmala Aralikatti
PublicNext

PublicNext

04/01/2022 07:28 pm

Cinque Terre

336.72 K

Cinque Terre

8

ಸಂಬಂಧಿತ ಸುದ್ದಿ