ಬೆಂಗಳೂರು: ಮೇಕೆದಾಟು ಯೋಜನೆ ವಿಳಂಬಕ್ಕೆ ಹಿಂದಿನ ಕಾಂಗ್ರೆಸ್ ಸರ್ಕಾರ ಕಾರಣ ಎಂದಿರುವ ಜಲಸಂಪನ್ಮೂಲ
ಸಚಿವ ಗೋವಿಂದ್ ಕಾರಜೋಳ ಇದಕ್ಕೆ ಸಂಬಂಧಿಸಿದಂತೆ ಕೆಲವು ದಾಖಲೆ ಬಿಡುಗಡೆ ಮಾಡಿದ್ದಾರೆ.
4ಜಿ ವಿನಾಯಿತಿ ನೀಡಬೇಕು ಎಂದು ಕಾವೇರಿ ನೀರಾವರಿ ನಿಗಮದಿಂದ ಆಗಿನ ಸರ್ಕಾರಕ್ಕೆ 2013ರ ನ.5ರಂದು ಪತ್ರ ಬರೆಯಲಾಗಿತ್ತು. 2014ರ ಏ.7ರಂದು ಸರ್ಕಾರ ಆ ಪ್ರಸ್ತಾವನೆಯನ್ನು ತಿರಸ್ಕರಿಸಿ ಟೆಂಡರ್ ಕರೆಯಬೇಕು ಎಂದು ತಿಳಿಸಿತ್ತು. 2018ರ ಡಿಸೆಂಬರ್ ನಲ್ಲಿ 4ಜಿ ವಿನಾಯಿತಿ ನೀಡುವಂತೆ ಮತ್ತೊಮ್ಮೆ ಕೇಳಲಾಗಿದೆ. 2019ರ ಜನವರಿಯಲ್ಲಿ 4ಜಿ ವಿನಾಯಿತಿ ನೀಡುವಂತೆ ಮತ್ತೊಮ್ಮೆ ಕೇಳಲಾಗುತ್ತದೆ. 2019ರ ಜನವರಿಯಲ್ಲಿ 4ಜಿ ವಿನಾಯಿತಿಗೆ ಅನುಮತಿ ನೀಡಲಾಗುತ್ತದೆ. ಇದೆಲ್ಲವೂ ಸಮ್ಮಿಶ್ರ ಸರ್ಕಾರದಲ್ಲಿ ಆಗಿದ್ದು. ಆಗ ಹೆಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಜಲಸಂಪನ್ಮೂಲ ಸಚಿವರಾಗಿದ್ದರು ಎಂದು ವಿವರಿಸಿದರು.
2013-18ರ ಅವಧಿಯವರೆಗೆ ಕಾಂಗ್ರೆಸ್ ಸರ್ಕಾರ ಇದ್ದು, ಆಗ ಯಾವುದೇ ಕೆಲಸ ಮಾಡಲಿಲ್ಲ. 4ಜಿ ವಿನಾಯಿತಿ ನೀಡಲು ಐದು ವರ್ಷ ಸಮಯಾವಕಾಶದ ಅಗತ್ಯವಿದೆಯೇ? ಕೇವಲ ಒಂದು ಟೆಂಡರ್ ಕರೆಯಲು ಇವರಿಗೆ ಐದು ವರ್ಷ ಬೇಕಾಯ್ತಾ? ಎಂದು ಪ್ರಶ್ನಿಸಿದ ಗೋವಿಂದ ಕಾರಜೋಳ ಸರ್ಕಾರವನ್ನು ತರಾಟೆಗೆ ತೆಗೆದಕೊಂಡಿದ್ದಾರೆ.
PublicNext
07/01/2022 01:57 pm