ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಾರ್ವಜನಿಕ ಸಭೆಯಲ್ಲೇ ಬಿಜೆಪಿ ಶಾಸಕನ ಕೆನ್ನೆಗೆ ಬಾರಿಸಿದ ರೈತ

ಲಕ್ನೋ: ಉತ್ತರ ಪ್ರದೇಶದ ಸದರ್​ ಕ್ಷೇತ್ರದ ಬಿಜೆಪಿ ಶಾಸಕ ಪಂಕಜ್​ ಗುಪ್ತಾಗೆ ಸಾರ್ವಜನಿಕ ಕಾರ್ಯಕ್ರಮದ ವೇದಿಕೆ ಮೇಲೆಯೇ ರೈತನೋರ್ವ ಕಪಾಳಮೋಕ್ಷ ಮಾಡಿದ್ದಾನೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​​ ಆಗಿದೆ.

ಈ ಘಟನೆಯು ಮೂರು ದಿನಗಳ ಹಿಂದೆ ನಡೆದಿದ್ದ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ನಡೆದಿದೆ ಎನ್ನಲಾಗಿದೆ. ರೈತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ.

ಈ ವಿಡಿಯೋ ತುಣಕನ್ನು ಸಮಾಜವಾದಿ ಪಕ್ಷವು ತನ್ನ ಅಧಿಕೃತ ಟ್ವಿಟ್ಟರ್‌ ಖಾತೆಯಿಂದ ಟ್ವೀಟ್ ಮಾಡಿದ್ದು, ಉನ್ನಾವೋ ಸದರ್‌ನ ನಡೆದ ಸಾರ್ವಜನಿಕ ಸಭೆಯಲ್ಲಿ ವೇದಿಕೆ ಮೇಲೆ ಕುಳಿತಿದ್ದ ಬಿಜೆಪಿ ಶಾಸಕ ಪಂಕಜ್ ಗುಪ್ತಾ ಅವರಿಗೆ ರೈತ ಮುಖಂಡ ಕಪಾಳಮೋಕ್ಷ ಮಾಡಿದ್ದಾರೆ. ಈ ಕಪಾಳಮೋಕ್ಷವು ಬಿಜೆಪಿ ಶಾಸಕನಿಗಲ್ಲ. ಬದಲಾಗಿ ಬಿಜೆಪಿ ಆಡಳಿತವಿರುವ ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರದ ನೀತಿಗಳು, ದುರಾಡಳಿತ ಮತ್ತು ಸರ್ವಾಧಿಕಾರಕ್ಕೆ ಎಂದು ಬರೆದುಕೊಂಡಿದೆ.

Edited By : Vijay Kumar
PublicNext

PublicNext

07/01/2022 10:32 pm

Cinque Terre

110.49 K

Cinque Terre

24

ಸಂಬಂಧಿತ ಸುದ್ದಿ