ರಾಮನಗರ: ಕೊರೊನಾ ನಿಯಂತ್ರಿಸಲು ರಾಜ್ಯ ಸರ್ಕಾರ ಜಾರಿಗೆ ತಂದಿರುವ ವೀಕೆಂಡ್ ಕರ್ಫ್ಯೂ ನಡುವೆಯೂ ಮೇಕೆದಾಟು ಹೋರಾಟಕ್ಕೆ ಕನಕಪುರ ಸರ್ವ ರೀತಿಯಲ್ಲೂ ಸಜ್ಜಾಗಿದೆ. ಪಾದಯಾತ್ರೆ ಆರಂಭದ ಸ್ಥಳ ಸೇರಿದಂತೆ ಯಾತ್ರೆ ಸಾಗುವ ಮಾರ್ಗದುದ್ದಕ್ಕೂ ಭರದ ಸಿದ್ಧತೆಗಳು ನಡೆಯುತ್ತಿವೆ.
ಈ ನಡುವೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಟೆಂಪಲ್ ರನ್ ಕೈಗೊಂಡಿದ್ದಾರೆ. ಅಷ್ಟೇ ಅಲ್ಲದೆ ಕಾಂಗ್ರೆಸ್ ಶಾಸಕರು, ನಾಯಕರ ಜೊತೆಗೆ ಮಸೀದಿಯೊಂದಕ್ಕೆ ತೆರಳಿದ ಡಿ.ಕೆ.ಶಿವಕುಮಾರ್ ಅವರು ನಮಾಜ್ ಕೂಡ ಮಾಡಿದ್ದಾರೆ.
ಇದಕ್ಕೂ ಮುನ್ನ ಕನಕಪುರ ಟೌನ್ನಲ್ಲಿರುವ ಕೆಂಕೇರಮ್ಮ ದೇವಾಲಯ, ತಮ್ಮ ಬೆಂಬಲಿಗರೊಂದಿಗೆ ಭೇಟಿ ನೀಡಿದ್ದ ಡಿಕೆಎಸ್, ಪಾದಯಾತ್ರೆ ಯಶಸ್ವಿಯಾಗಲಿ ಎಂದು ಬೇಡಿಕೊಂಡರು. ಡಿ.ಕೆ.ಶಿವಕುಮಾರ್ ಅವರಿಗೆ ಪತ್ನಿ ಉಷಾ ಅವರು ಸಾಥ್ ನೀಡಿದ್ದರು.
PublicNext
08/01/2022 04:51 pm