ಬೆಂಗಳೂರು: ಮೇಕೆದಾಟು ಯೋಜನೆ ಕೂಡಲೇ ಆರಂಭಿಸುವಂತೆ ಒತ್ತಾಯಿಸಿ ರಾಜ್ಯ ಕಾಂಗ್ರೆಸ್ ಹಮ್ಮಿಕೊಂಡಿರುವ ಪಾದಯಾತ್ರೆ ಇಂದಿನಿಂದ ಆರಂಭವಾಗಲಿದೆ. ಕನಕಪುರ ಸಮೀಪದ ಕಾವೇರಿ ಹಾಗೂ ಅರ್ಕಾವತಿ ನದಿ ಸಂಗಮ ಸ್ಥಳದಿಂದ ಪಾದಯಾತ್ರೆ ಆರಂಭವಾಗಲಿದೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ನಡೆಯವ 10 ದಿನಗಳ 'ನೀರಿಗಾಗಿ ನಡಿಗೆ'ಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಇಂದು ಬೆಳಗ್ಗೆ 8.30 ಕ್ಕೆ ಚಾಲನೆ ನೀಡಲಿದ್ದಾರೆ.
ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ಬೆಂಗಳೂರು ನಗರ ಸೇರಿದಂತೆ ಒಟ್ಟು 169 ಕಿಮೀ ದೂರ ಹಾದುಹೋಗುವ ಈ ಪಾದಯಾತ್ರೆಗೆ ಆಡಳಿತಾರೂಢ ಬಿಜೆಪಿ ಮತ್ತು ಜೆಡಿಎಸ್ ತೀವ್ರ ಆಕ್ಷೇಪ ಎತ್ತಿವೆ. ಜೊತೆಗೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಪಾದಯಾತ್ರೆ ಕೈಬಿಡುವಂತೆ ಕಾಂಗ್ರೆಸ್ ನಾಯಕರಿಗೆ ರಾಜ್ಯ ಸರ್ಕಾರ ಒತ್ತಾಯಿಸಿದೆ.
PublicNext
09/01/2022 07:25 am