ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪಂಜಾಬ್‌ನಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರ ಕಳೆದುಕೊಳ್ಳೋದು ಗ್ಯಾರಂಟಿ: ಸಿ.ಟಿ.ರವಿ

ಚಿಕ್ಕಮಗಳೂರು: ಪಂಜಾಬ್‌ನಲ್ಲಿ ಈ ಬಾರಿ ಕಾಂಗ್ರೆಸ್ ಪಕ್ಷ ಅಧಿಕಾರ ಕಳೆದುಕೊಳ್ಳೋದು ಗ್ಯಾರಂಟಿ. ಬೇಕಾದ್ರೆ ನನ್ನನ್ನು ಜ್ಯೋತಿಷಿ ಎಂದು ಕರೆದರೂ ಅಡ್ಡಿಯಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಭವಿಷ್ಯ ನುಡಿದಿದ್ದಾರೆ.

ಚಿಕ್ಕಮಗಳೂರಿನ ಬಸವನಹಳ್ಳಿಯಲ್ಲಿರುವ ತಮ್ಮ ನಿವಾಸದಲ್ಲಿ ಮೇಕೆದಾಟು ಪಾದಯಾತ್ರೆ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೇಕೆದಾಟು ಯೋಜನೆಗೆ ಅಡ್ಡಿಯಾಗಿರುವುದು ತಮಿಳುನಾಡು ಸರ್ಕಾರ. ರಾಜ್ಯದ ಕಾಂಗ್ರೆಸ್ ನಾಯಕರು ತಮಿಳುನಾಡಿನ ಡಿಎಂಕೆ ನೇತೃತ್ವದ ಕಾಂಗ್ರೆಸ್ ಸರ್ಕಾರದ ಮನವೊಲಿಸಿದರೆ ಕೆಲಸ ಸುಲಭವಾಗುತ್ತೆ. ಸುಲಭವಾಗಿ ಆಗುವ ಕೆಲಸಕ್ಕೆ ಕಾಂಗ್ರೆಸ್ಸಿಗರು ತುಂಬಾ ಕಷ್ಟಪಡುತ್ತಿದ್ದಾರೆ. ಮನವೊಲಿಕೆ ಕಾರ್ಯ ಬಿಟ್ಟು ಕಾಂಗ್ರೆಸ್ ನಾಯಕರು ಪಾದಯಾತ್ರೆ ಮೂಲಕ ಕಷ್ಟ ಪಡುತ್ತಿದ್ದಾರೆ ಎಂದು ಸಿ.ಟಿ ರವಿ ವ್ಯಂಗ್ಯವಾಡಿದರು.

Edited By : Nagaraj Tulugeri
PublicNext

PublicNext

09/01/2022 07:47 am

Cinque Terre

83.81 K

Cinque Terre

21