ಬೆಂಗಳೂರು: ಮೇಕೆದಾಟು ವಿಚಾರವಾಗಿ ಸುಳ್ಳು ಜಾಹೀರಾತು ನೀಡಿದ ರಾಜ್ಯ ಸರ್ಕಾರ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡಿದೆ. ಮೇಕೆದಾಟು ಯೋಜನೆಗಾಗಿ ಕಳೆದ ಎರಡೂವರೆ ವರ್ಷಗಳಿಂದ ಸರ್ಕಾರ ಏನನ್ನೂ ಮಾಡಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಶನಿವಾರ ಮಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ವಿಚಾರದಲ್ಲಿ ರಾಜ್ಯ ಸರ್ಕಾರ ಕೇಂದ್ರಕ್ಕೆ ಒತ್ತಡ ಹೇರಿಲ್ಲ. ಯಾವುದೇ ಅಡೆತಡೆ ಇಲ್ಲದಿದ್ದರೂ ಕೆಲಸ ಆರಂಭವಾಗಿಲ್ಲ. ಬಿಜೆಪಿಯಿಂದ ವಿಳಂಬ ದ್ರೋಹ ಆಗಿದೆ. ಈಗ ಅದಕ್ಕೆ ರಾಜಕೀಯ ಬಣ್ಣ ನೀಡುವ ಪ್ರಯತ್ನ ಮಾಡುತ್ತಿದೆ. ಬಿಜೆಪಿ ಸರ್ಕಾರ ಇನ್ನೊಬ್ಬರ ಮೇಲೆ ಗೂಬೆ ಕೂರಿಸುತ್ತಿದೆ’ ಎಂದು ದೂರಿದರು. ಯಾರು ಎಷ್ಟೇ ಅಡೆತಡೆ ಒಡ್ಡಲಿ. ನಾವು ಮಾತ್ರ ಪಾದಯಾತ್ರೆ ಮಾಡೇ ಮಾಡ್ತೀವಿ. ರಾಜ್ಯದ ಯಾವ ಭಾಗದಲ್ಲಿಯೂ 144 ಸೆಕ್ಷನ್ ಜಾರಿಯಾಗಿಲ್ಲ. ಆದರೆ ರಾಮನಗರದಲ್ಲಿ ಮಾತ್ರ ಜಾರಿ ಆಗಿದೆ ಎಂದರೆ ಇದು ಪಾದಯಾತ್ರೆಯನ್ನು ಹತ್ತಿಕ್ಕುವ ಹುನ್ನಾರವಲ್ಲದೇ ಮತ್ತಿನ್ನೇನು? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
PublicNext
09/01/2022 09:20 am