ಬೆಂಗಳೂರು: ರೈತಗೀತೆ ಹಾಡುವ ಮೂಲಕ ಕಾಂಗ್ರೆಸ್ ನೇತೃತ್ವದ ಮೇಕೆದಾಟು ಜನಯಾತ್ರೆಗೆ ಚಾಲನೆ ನೀಡಲಾಗಿದೆ.
ಇಂದಿನಿಂದ ಜನವರಿ 18ರವರೆಗೆ ಪಾದಯಾತ್ರೆ ನಡೆಯಲಿದೆ. ಕೆಪಿಸಿಸಿ ಅಧ್ಯಕ್ಷ ಡಿ. ಕೆ ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಇತರ ಕೈ ನಾಯಕರು ಮತ್ತು ಕಾರ್ಯಕರ್ತರು ಮೊದಲ ದಿನ 15 ಕಿಲೋ ಮೀಟರ್ ಪಾದಯಾತ್ರೆ ಮಾಡಲಿದ್ದಾರೆ. ಸಂಗಮದಿಂದ ದೊಡ್ಡ ಆಲಹಳ್ಳಿಯವರೆಗೂ ಈ ಪಾದಯಾತ್ರೆ ನಡೆಯಲಿದೆ. ನಮ್ಮ ನೀರು ನಮ್ಮ ಹಕ್ಕು ಘೋಷ ವಾಕ್ಯದೊಂದಿಗೆ ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ ಆರಂಭಿಸಿದೆ. ಸಂಜೆಯ ವೇಳೆಗೆ ಕನಕಪುರವನ್ನು ತಲುಪಲಿದ್ದಾರೆ.
ಇನ್ನು ಸಂಗಮ ಸ್ಥಳದಲ್ಲಿ ಬೇಕಾಬಿಟ್ಟಿಯಾಗಿ ಕೊರೊನಾ ನಿಯಮ ಉಲ್ಲಂಘನೆಯಾಗಿದೆ. ಕಾಂಗ್ರೆಸ್ ನಾಯಕರೂ ಸೇರಿದಂತೆ ಕಾರ್ಯಕರ್ತರು ಮಾಸ್ಕ್ ಇಲ್ಲದೇ, ದೈಹಿಕ ಅಂತರವಿಲ್ಲದೇ ಸಾವಿರಾರು ಜನ ಸೇರಿದ್ದಾರೆ.
PublicNext
09/01/2022 10:03 am