ರಾಮನಗರ: ಮೇಕೆದಾಟು ಯೋಜನೆಗಾಗಿ ಒತ್ತಾಯಿಸಿ ಕಾಂಗ್ರೆಸ್ ಹಮ್ಮಿಕೊಂಡಿರುವ ಪಾದಯಾತ್ರೆ ಇಂದಿನಿಂದ ಆರಂಭವಾಗಿದೆ. ಇಂದು ಭಾನುವಾರ ಬೆಳಿಗ್ಗೆ ಅರ್ಕಾವತಿ- ಕಾವೇರಿ ಸಂಗಮ ಸ್ಥಳದಲ್ಲಿ ಪೂಜೆ ಸಲ್ಲಿಸುವ ವೇಳೆ ಕೆಪಿಸಿಸಿ ಅಧ್ಯಕ್ಷ ಎಡವಿದ್ದಾರೆ. ಅದರ ವಿಡಿಯೋ ಈಗ ಎಲ್ಲೆಡೆ ವೈರಲ್ ಆಗುತ್ತಿದೆ.
ಇದೇ ವಿಡಿಯೋ ಹಾಕಿ ಟ್ವೀಟ್ ಮಾಡಿದ ರಾಜ್ಯ ಬಿಜೆಪಿ 'ಡಿಕೆ ದಾಟಲಿಲ್ಲ, ಮೇಕೆಯಾದರೂ ದಾಟಲಿ' ಎಂದು ಕಾಲೆಳೆದಿದೆ.
ಸಂಗಮ ಸ್ಥಳದಲ್ಲಿ ಸ್ನಾನ ಮುಗಿಸಿದ ಡಿಕೆಶಿ ನಂತರ ಪೂಜೆಗೆ ಕುಳಿತುಕೊಳ್ಳುವಾಗ ಎಡವಿ ನೆಲಕ್ಕೆ ವಾಲಿದ್ದಾರೆ.
PublicNext
09/01/2022 02:46 pm