ಬಾಗಲಕೋಟೆ: ಮಾಜಿ ಸಿಎಂ ಸಿದ್ದರಾಮಯ್ಯರಿಗೆ ತೀವ್ರ ಜ್ವರ ಕಾಣಿಸಿಕೊಂಡ ಹಿನ್ನಲೆಯಲ್ಲಿ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಕಳವಳ ವ್ಯಕ್ತಪಡಿಸಿದ್ದಾರೆ.
ರಾಜ್ಯದಲ್ಲಿ ದಿನೇ ದಿನೇ ಕೋವಿಡ್ ಹೆಚ್ಚುತ್ತಿದ್ದು, ನಿನ್ನೆ ಒಂದೇ ದಿನ ಹನ್ನೆರಡು ಸಾವಿರಕ್ಕೂ ಹೆಚ್ಚು ಪ್ರಕರಣಗಳು ಪತ್ತೆಯಾಗಿವೆ.
ಇಂತಹ ಸಂದರ್ಭದಲ್ಲಿ ಕಾಂಗ್ರೆಸ್ ನವರು ರಾಜಕೀಯ ಹೋರಾಟಕ್ಕಾಗಿ, ತಮ್ಮೊಳಗಿನ ನಾಯಕತ್ವದ ಪೈಪೋಟಿಗಾಗಿ ಪಾದಯಾತ್ರೆ ಮಾಡುತ್ತಿದ್ದಾರೆ.
ಇದು ರಾಜ್ಯದ ಜನರ ಹಿತದೃಷ್ಟಿಯಿಂದ ಮಾಡುವ ಪ್ರಾಮಾಣಿಕ ಪಾದಯಾತ್ರೆ ಅಲ್ಲ. ನಾನು ಇವತ್ತು ಕೂಡ ಕಾಂಗ್ರೆಸ್ ನ ಪ್ರತಿಪಕ್ಷದ ನಾಯಕರಿಗೆ ವಿನಂತಿ ಮಾಡುತ್ತೇನೆ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು, ಹೆಚ್ಚು ಜನ ಸೇರಬಾರದು ಎಲ್ಲರೂ ಮಾಸ್ಕ್ ಧರಿಸಬೇಕು ಎಂದು ವಿನಂತಿಸಿಕೊಂಡಿದ್ದಾರೆ.
ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆ ಮಾಡುವ ಹಕ್ಕು ಎಲ್ಲರಿಗೂ ಇದೆ.ಆ ಹಕ್ಕನ್ನು ಮೊಟಕುಗೊಳಿಸಬಾರದು ಎಂದು ನಮ್ಮ ಸರ್ಕಾರ ಅವರಿಗೆ ಯಾವುದೇ ತೊಂದರೆ ಕೊಟ್ಟಿಲ್ಲ.
ನಾನು ಸಿದ್ದರಾಮಯ್ಯನವರಿಗೆ ಮನವಿ ಮಾಡುತ್ತೇನೆ ಆರೋಗ್ಯದ ಕಡೆ ಗಮನ ಕೊಡಬೇಕು ವಿಶ್ರಾಂತಿ ತೆಗೆದುಕೊಳ್ಳಬೇಕು ಎಂದು ಮನವಿ ಮಾಡಿದರು.
PublicNext
10/01/2022 11:36 am