ರಾಮನಗರ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಗಡ್ಡ ಬಿಟ್ಟಿರುವ ರಹಸ್ಯ ಬಿಚ್ಚಿಟ್ಟಿದ್ದಾರೆ.
ಸ್ವಗ್ರಾಮ ದೊಡ್ಡಆಲಹಳ್ಳಿಯಲ್ಲಿ ನಿನ್ನೆ ರಾತ್ರಿ ಮಾತನಾಡಿದ ಅವರು, 'ತಿಹಾರ ಜೈಲಿಗೆ ಹೋಗಿದ್ದಕ್ಕೆ ಈ ಗಡ್ಡ ಬಿಟ್ಟಿದ್ದೇನೆ. ನೀವೆ ಇದಕ್ಕೆ ಮುಕ್ತಿ ಕೊಡಬೇಕು. ನಾನು ನಿಮ್ಮ ಮಗ. ನೀವೇ ಡಿ.ಕೆ. ಶಿವಕುಮಾರ್. ಕೇಂದ್ರ ಸರ್ಕಾರ ಮತ್ತೊಮ್ಮೆ ದಬ್ಬಾಳಿಕೆ ಮಾಡುತ್ತಿದ್ದಾರೆ. ಮತ್ತೊಮ್ಮೆ ಜೈಲಿಗೆ ಹಾಕಿಸಬೇಕು ಅಂತ ಷಡ್ಯಂತ್ರ ಮಾಡುತ್ತಿದ್ದಾರೆ. ಆದರೆ ನಾನು ಈ ಷಡ್ಯಂತ್ರಕ್ಕೆ ಹೆದರುವುದಿಲ್ಲ' ಎಂದು ಗುಡುಗಿದ್ದಾರೆ.
'ನನ್ನನ್ನು ಮತ್ತೆ ಜೈಲಿಗೆ ಹಾಕಿಸಬೇಕೆಂದು ಷಡ್ಯಂತ್ರ ಮಾಡುತ್ತಿದ್ದಾರೆ. ಆದರೆ ನಾನು ಷಡ್ಯಂತ್ರಕ್ಕೆ ಹೆದರುವುದಿಲ್ಲ. ಇಡೀ ಊರಿನಲ್ಲಿ ಇಂಥ ಸಂಭ್ರಮ ನಾನು ನೋಡಿರಲಿಲ್ಲ. ನಿಮ್ಮಲ್ಲೆರಿಗೂ ನನ್ನ ಧನ್ಯವಾದಗಳು. ನಾನು ಜೈಲಿಗೆ ಹೋದಾಗ ನಿಮ್ಮ ಅಭಿಮಾನ ಬೆಂಬಲ ಮರೆಯೋಕೆ ಆಗಲ್ಲ. ಡಿ.ಕೆ.ಶಿವಕುಮಾರ್ ದೊಡ್ಡಆಲಹಳ್ಳಿಯ ಕನಕಪುರದವನು ಅಂತಾರೆ' ಎಂದು ಭಾವನಾತ್ಮಕ ಭಾಷಣ ಮಾಡಿದ್ದಾರೆ.
PublicNext
10/01/2022 12:25 pm