ರಾಮನಗರ: ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ನಡೆಸುತ್ತಿರುವ ಪಾದಯಾತ್ರೆಯು ಎರಡನೇ ದಿನಕ್ಕೆ ಕಾಲಿಟ್ಟಿದೆ. ಈ ಹೋರಾಟದ ಪ್ರಮುಖ ರೂವಾರಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಇಂದು ಬೆಳಗ್ಗೆ ಬಿಡುವಿನ ಸಮಯದಲ್ಲಿ ಹೇರ್ ಕಟ್ ಮಾಡಿಸಿಕೊಂಡು ಮತ್ತಷ್ಟು ಸ್ಮಾರ್ಟ್ ಆಗಿದ್ದಾರೆ.
ಡಿ.ಕೆ. ಶಿವಕುಮಾರ್ ಅವರು ಇಂದು ಬೆಳಗ್ಗೆ ದೊಡ್ಡ ಆಲಹಳ್ಳಿಯ ತಮ್ಮ ನಿವಾಸದಲ್ಲಿ ಕ್ಷೌರಿಕನಿಂದ ಕ್ಷೌರ ಮಾಡಿಸಿಕೊಂಡಿದ್ದಾರೆ. ತಮ್ಮ ಹುಟ್ಟೂರು ಸಾತನೂರಿನ ದೊಡ್ಡಾಲಹಳ್ಳಿಯಲ್ಲಿ ಬಾಲ್ಯದ ಗೆಳೆಯ, ತಮ್ಮ ಹಳೆಯ ಕ್ಷೌರಿಕ ನಾಗರಾಜ್ ಅವರಿಂದ ಕ್ಷೌರ ಮಾಡಿಸಿಕೊಂಡಿದ್ದಾರೆ. ನಿನ್ನೆಯಷ್ಟೇ ಇದು ತಿಹಾರ್ ಜೈಲಿನಲ್ಲಿ ಬಿಟ್ಟಿದ್ದು ಎಂದು ತೋರಿಸಿದ್ದ ಗಡ್ಡವನ್ನು ಇಂದು ಲೈಟಾಗಿ ಟ್ರಿಮ್ ಮಾಡಿಸಿಕೊಂಡಿದ್ದಾರೆ.
PublicNext
10/01/2022 02:11 pm