ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

‘ಪಾದಯಾತ್ರೆ’ ಯಿಂದ ನೀರು ಸಿಗಲ್ಲ ಕೋವಿಡ್ ಫ್ರೀ : ಈಶ್ವರಪ್ಪ

ಶಿವಮೊಗ್ಗ: ರಾಜ್ಯದಲ್ಲಿ ಕೊರೊನಾ ತಾಂಡವವಾಡುತ್ತಿರುವ ಮಧ್ಯೆ ಮೇಕೆದಾಟು ಯೋಜನೆಗಾಗಿ ಜ.9 ರಿಂದ ಕಾಂಗ್ರೆಸ್ ನವರು ಪಾದಯಾತ್ರೆ ಆರಂಭಿಸಿದ್ದಾರೆ. ಈ ಪಾದಯಾತ್ರೆಯಿಂದ ಜನರಿಗೆ ನೀರು ಸಿಗಲ್ಲ ಬದಲಿಗೆ ಎಲ್ಲರಿಗೂ ಕೋವಿಡ್ ಸಿಗಲಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಕೆ ಶಿವಕುಮಾರ್ ತಾನು ಚಾಂಪಿಯನ್ ಆಗಬೇಕು, ಸಿಎಂ ಅಗಬೇಕು ಎನ್ನುವ ಲೆಕ್ಕದಲ್ಲಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರಿಗೂ ಕೋವಿಡ್ ಹೆಚ್ಚುವ ಅಧಿಕಾರವನ್ನು ಸೋನಿಯಾ ಗಾಂಧಿ ಕೊಟ್ರಾ? ನೀವು ಸಿಎಂ ಆಗುವ ಭ್ರಮೆಯಲ್ಲಿ ರಾಜ್ಯದ ಜನರಿಗೆ ಕೋವಿಡ್ ಹರಡುವ ಪ್ರಯತ್ನ ಒಳ್ಳೆಯದು ಮಾಡಲ್ಲ. ಮೊದಲನೆಯದಾಗಿ ನೀವು ಸಿಎಂ ಆಗುವುದೇ ಕನಸು ಎಂದು ವ್ಯಂಗ್ಯವಾಡಿದ್ದಾರೆ.

ಈಗಾಗಲೇ ಸಿದ್ದರಾಮಯ್ಯ ಜ್ವರ ಅಂತಾ ಸುಸ್ತಾಗಿ ವಾಪಾಸ್ ಬಂದಿದ್ದಾರೆ. ಅವರು ಯಾವುದೇ ಪಕ್ಷದವರು ಇರಬಹುದು. ಆರೋಗ್ಯ ಮುಖ್ಯ. ರಾಜ್ಯದ ಜನರಿಗೆ ಕೋವಿಡ್ ಹರಡುವುದನ್ನು ನಾನು ಖಂಡಿಸುತ್ತೇನೆ ಎಂದರು.

Edited By : Nirmala Aralikatti
PublicNext

PublicNext

10/01/2022 03:06 pm

Cinque Terre

23.17 K

Cinque Terre

2