ವಿಜಯಪುರ:ಪಂಚಮಸಾಲಿ 2ಎ ಮೀಸಲಾತಿ ಹೋರಾಟಕ್ಕೆ ಸಂಕ್ರಾಂತಿಗೆ ಒಂದು ವರ್ಷ ಪೂರ್ಣಗೊಳ್ಳುತ್ತದೆ. ಈ ಹಿನ್ನೆಲೆಯಲ್ಲಿಯೇ ಕೂಡಲಸಂಗಮದಲ್ಲಿ ಒಂದು ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಅದಕ್ಕೆ ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನೂ ಆಹ್ವಾನಿಸಿದ್ದೇವೆ ಎಂದು ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ.
ಜನವರಿ-14 ರಂದು ಕೂಡಲಸ ಸಂಗಮದಲ್ಲಿ ಈ ವಿಶೇಷ ಕಾರ್ಯಕಮ ಇದೆ. ಇದಕ್ಕಾಗಿಯೇ ಈಗಲೇ ಎಲ್ಲ ಸಿದ್ಧತೆ ನಡೆದಿದೆ. ಆದರೆ ಕೋವಿಡ್ ಕಾರಣದಿಂದ ಇಲ್ಲಿಯ ಜಿಲ್ಲಾಧಿಕಾರಿ ಕಾರ್ಯಕ್ರಮ ಮುಂದೂಡಿ ಅಂತಲೇ ಹೇಳಿದ್ದಾರೆ. ಆದರೆ, ಈ ಬಗ್ಗೆ ನಾಳೆ ಸ್ವಾಗತ ಸಮಿತಿ ಅಧ್ಯಕ್ಷ ಬಸನಗೌಡ ಪಾಟೀಲ್ ಯತ್ನಾಳ್, ರಾಷ್ಟ್ರೀಯ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ್ ಜೊತೆಗೆ ಒಂದು ಸಭೆ ಮಾಡುತ್ತೇವೆ. ಆಗಲೇ ಇಡೀ ಕಾರ್ಯಕ್ರಮ ಆಯೋಜನೆಯ ಸ್ಪಷ್ಟ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದಿದ್ದಾರೆ ಜಯಮೃತ್ಯುಂಜಯ ಸ್ವಾಮೀಜಿ.
ವಿಜಯಪುರದ ಮಾಧ್ಯಮದೊಂದಿಗೆ ಮಾತನಾಡುವಾಗ ಈ ಎಲ್ಲ ವಿಷಯವನ್ನ ಸ್ವಾಮೀಜಿ ವಿವರವಾಗಿಯೇ ಹೇಳಿದ್ದಾರೆ.
PublicNext
10/01/2022 06:25 pm