ಮಂಡ್ಯ: ಸಚಿವ ಕೆ.ಸಿ.ನಾರಾಯಣಗೌಡ ಭೇಟಿ ನೀಡಿ ತಹಶೀಲ್ದಾರ್ ಶ್ವೇತಾ ಎನ್ ರವೀಂದ್ರ ಹಾಗೂ ಮಂಡ್ಯ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಟಿ.ಶ್ರೀಧರ್ ಅವ್ರನ್ನ ತರಾಟೆಗೆ ತೆದುಕೊಂಡಿದ್ದಾರೆ.
ಹೌದು. ಜಿಲ್ಲೆಯ ಶ್ರೀರಂಗಪಟ್ಟಣದ ಖಾಸಗಿ ಸಮುದಾಯ ಭವನದ ಕೋವಿಡ್ ಕೇರ್ ಸೆಂಟರ್ನಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಬಂದಿದ್ದವು. ಈ ಹಿನ್ನೆಲೆ ಸಚಿವ ಕೆ.ಸಿ.ನಾರಾಯಣಗೌಡ ಅವರು ಕೋವಿಡ್ ಕೇರ್ ಸೆಂಟರ್‌ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಮೂಲಭೂತ ಸೌಕರ್ಯಗಳ ಕೊರತೆ ಕಂಡು ತಹಶೀಲ್ದಾರ್ ಶ್ವೇತಾ ಎನ್ ರವೀಂದ್ರ ಹಾಗೂ ಮಂಡ್ಯ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಟಿ.ಶ್ರೀಧರ್ ಅವರನ್ನು ತರಾಟೆಗೆ ತೆದುಕೊಂಡರು.
PublicNext
11/01/2022 01:18 pm