ಬೆಂಗಳೂರು: ಮೇಕೆದಾಟು ಯೋಜನೆಗಾಗಿ ಕಾಂಗ್ರೆಸ್ ನವರು ನಡೆಸುತ್ತಿರುವ ಪಾದಯಾತ್ರೆಗೆ ಇಂದು ನಾಲ್ಕನೇ ದಿನ.ಇಂದಿನ ಪಾದಯಾತ್ರೆ ಆರಂಭವಾಗಿ 7 ಕಿ.ಮೀ ಕ್ರಮಿಸುತ್ತಿದ್ದಂತೆ ತೀವ್ರ ಬೆನ್ನು ನೋವು ಸಮಸ್ಯೆ ಎದುರಿಸಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪಾದಯಾತ್ರೆ ಮೊಟಕುಗೊಳಿಸಿ ಬೆಂಗಳೂರಿಗೆ ವಾಪಸ್ಸಾಗಿದ್ದಾರೆ.
ಇತ್ತ ಪಾದಯಾತ್ರೆ ವಿಚಾರವಾಗಿ ಕಾಂಗ್ರೆಸ್ ಹಾಗೂ ರಾಜ್ಯ ಸರ್ಕಾರವನ್ನು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಯಾರ ಅನುಮತಿ ಪಡೆದು ಪಾದಯಾತ್ರೆ ನಡೆಸುತ್ತಿದ್ದೀರಿ ಎಂದು ಕೋರ್ಟ್ ಪ್ರಶ್ನಿಸಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.
PublicNext
12/01/2022 05:27 pm