ಲಖನೌ: 2022 ರ ಚುನಾವಣೆ ಬೆನ್ನಲ್ಲೇ ಉತ್ತರ ಪ್ರದೇಶದಲ್ಲಿ ಸಾಕಷ್ಟು ರಾಜಕೀಯ ಬದಲಾವಣೆಗಾಳಾಗುತ್ತಿವೆ. ಸದ್ಯ ಮುಖ್ಯಮಂತ್ರಿಯಾಗಿರುವ ಯೋಗಿ ಆದಿತ್ಯನಾಥ್ ಸರ್ಕಾರದಲ್ಲಿ ಸಂಪುಟ ಸಚಿವ ಸ್ವಾಮಿ ಪ್ರಸಾದ್ ಮೌರ್ಯ ನಿನ್ನೆ ಜ.11 ರಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ನಾಲ್ಕು ಇಲಾಖೆಗಳ ಜವಾಬ್ದಾರಿಯನ್ನು ಹೊತ್ತುಕೊಂಡಿದ್ದ ಸ್ವಾಮಿ ಪ್ರಸಾದ್, ಇದ್ದಕ್ಕಿದ್ದಂತೆ ರಾಜೀನಾಮೆ ನೀಡಿರುವುದು ಬಿಜೆಪಿ ಪಾಳಯದಲ್ಲಿ ಸಂಚಲನ ಸೃಷ್ಟಿ ಮಾಡಿದೆ.
ಸದ್ಯ ಸ್ವಾಮಿ ಪ್ರಸಾದ್ ರಾಜೀನಾಮೆ ಕೊಟ್ಟ 24 ಗಂಟೆಗಳಲ್ಲಿ ಅವರ ವಿರುದ್ಧ ಸುಲ್ತಾನ್ ಪುರ ನ್ಯಾಯಾಲಯವು ಬಂಧನ ವಾರಂಟ್ ಹೊರಡಿಸಿದೆ ಎಂದು ‘ಎನ್ ಡಿಟಿವಿ’ ವರದಿ ಮಾಡಿದೆ.
2014 ರಲ್ಲಿ ದ್ವೇಷ ಭಾಷಣ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೌರ್ಯ ವಿರುದ್ಧ ಬಂಧನ ವಾರಂಟ್ ಹೊರಡಿಸಲಾಗಿದೆ. ಹಿಂದೂ ದೇವರುಗಳ ವಿರುದ್ಧ ಮಾತನಾಡಿದ್ದಾರೆ ಎಂಬ ಆರೋಪವು ಮೌರ್ಯ ಮೇಲಿದೆ. ಯೋಗಿ ಆದಿತ್ಯನಾಥ್ ಅವರ ಸರ್ಕಾರದಲ್ಲಿ ಕಾರ್ಮಿಕ ಸಚಿವರಾಗಿ ಸ್ವಾಮಿ ಪ್ರಸಾದ್ ಮೌರ್ಯ ಕಾರ್ಯನಿರ್ವಹಿಸಿದ್ದರು. ಹಿಂದುಳಿದ ವರ್ಗಗಳ (ಒಬಿಸಿ) ಪ್ರಭಾವಿ ನಾಯಕರೂ ಆಗಿರುವ ಅವರು ಬಿಜೆಪಿ ತೊರೆದು ಸಮಾಜವಾದಿ ಪಕ್ಷಕ್ಕೆ ಮಂಗಳವಾರ (ಎಸ್ ಪಿ) ಸೇರಿದ್ದರು.
PublicNext
12/01/2022 05:56 pm