ಬೆಂಗಳೂರು: ಕಾಂಗ್ರೆಸ್ ನಾಯಕರು ಮೇಕೆದಾಟು ಯೋಜನೆಗೆ ಒತ್ತಾಯಿಸಿ ನಡೆಸುತ್ತಿರುವ ಪಾದಯಾತ್ರೆಗೆ ರಾಜ್ಯ ಸರ್ಕಾರ ನಿರ್ಬಂಧ ಹೇರಿದೆ.
ಪಾದಯಾತ್ರೆ ವಿಚಾರವಾಗಿ ಹೈಕೋರ್ಟ್ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಪಾದಯಾತ್ರೆಗೆ ನಿರ್ಬಂಧ ಹೇರಿ ಆದೇಶ ನೀಡಿದೆ.
ಮೇಕೆದಾಟು ಪಾದಯಾತ್ರೆಗೆ ಅನುಮತಿ ಕೊಟ್ಟಿಲ್ಲವೆಂದರೆ ಅದನ್ನು ತಡೆಯಲು ಯಾರಿಗಾಗಿ ಕಾಯುತ್ತಿದ್ದೀರಿ? ಎಂದು ಪ್ರಶ್ನಿಸಿದ ಹೈಕೋರ್ಟ್ ಸರ್ಕಾರಕ್ಕೆ ಛೀಮಾರಿ ಹಾಕಿತ್ತು. ಹೀಗಾಗಿ ಸರ್ಕಾರ ತಕ್ಷಣಕ್ಕೆ ಜಾರಿ ಬರುವಂತೆ ಪಾದಯಾತ್ರೆ ಮೇಲೆ ನಿರ್ಬಂಧ ಹೇರಿದೆ.
PublicNext
12/01/2022 09:08 pm