ಲಖನೌ: ವಿಧಾನಸಭೆ ಚುನಾವಣೆ ಬೆನ್ನಲ್ಲೇ ಉತ್ತರ ಪ್ರದೇಶದ ಬಿಜೆಪಿ ಪಾಳ್ಯದಲ್ಲಿ ಭಾರೀ ಬದಲಾವಣೆಗಳಾಗುತ್ತಿದ್ದು ಇದರಿಂದ ಬಿಜೆಪಿ ಆಘಾತ ಎದುರಾಗಿದೆ.
ಒಬ್ಬರ ಹಿಂದೊಬ್ಬರಂತೆ ಸಚಿವರು, ಶಾಸಕರು ರಾಜೀನಾಮೆ ನೀಡುತ್ತಿದ್ದಾರೆ. ಈ ಹಿಂದೆ ಯೋಗಿ ಆದಿತ್ಯನಾಥ ಅವರ ಸಚಿವ ಸಂಪುಟದಲ್ಲಿ ಸಚಿವರಾಗಿದ್ದ, ಪ್ರಭಾವಿ ನಾಯಕ ಸ್ವಾಮಿ ಪ್ರಸಾದ್ ಮೌರ್ಯ ಅವರು ಮಂಗಳವಾರ ಬಿಜೆಪಿ ತೊರೆದು ಸಮಾಜವಾದಿ ಪಕ್ಷವನ್ನು ಸೇರಿದ್ದರು. ಅವರೊಂದಿಗೆ ಶಾಸಕರಾದ ರೋಶನ್ ಲಾಲ್ ವರ್ಮಾ, ಭಗವತಿ ಸಾಗರ್ ಮತ್ತು ಬ್ರಿಜೇಶ್ ಪ್ರಜಾಪತಿ ಅವರೂ ಬಿಜೆಪಿ ಬಿಟ್ಟು ಎಸ್ ಪಿಗೆ ಸೇರ್ಪಡೆಗೊಂಡಿದ್ದರು.
ಇಂದು ಅರಣ್ಯ ಇಲಾಖೆಯನ್ನು ನಿಭಾಯಿಸುತ್ತಿದ್ದ ಪ್ರಬಲ ನಾಯಕ ದಾರಾ ಸಿಂಗ್ ಚೌಹಾಣ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. 403 ಸದಸ್ಯ ಬಲವನ್ನು ಹೊಂದಿರುವ ಉತ್ತರ ಪ್ರದೇಶದಲ್ಲಿ ಫೆಬ್ರುವರಿ 10ರಿಂದ ಮಾರ್ಚ್ 7ರ ವರೆಗೆ ಒಟ್ಟು ಏಳು ಹಂತಗಳಲ್ಲಿ ಮತದಾನ ನಡೆಯಲಿದೆ.
PublicNext
12/01/2022 09:59 pm