ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪಾದಯಾತ್ರೆ ನಿರ್ಬಂಧದ ಆದೇಶ ಪ್ರತಿ ನೋಡಿ ಸೈಲೆಂಟ್ ಆದ ಡಿ.ಕೆ ಶಿವಕುಮಾರ್

ಬೆಂಗಳೂರು: ಮೇಕೆದಾಟು ಯೋಜನೆಗಾಗಿ ಒತ್ತಾಯಿಸಿ ಕಾಂಗ್ರೆಸ್ ನಾಯಕರು ಹಮ್ಮಿಕೊಂಡಿದ್ದ ಪಾದಯಾತ್ರೆಗೆ ಸರ್ಕಾರ ನಿರ್ಬಂಧ ಹೇರಿದೆ. ಇದರ ಆದೇಶ ಪ್ರತಿ ನೋಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡಿದೇ ಸೈಲೆಂಟ್ ಆಗಿದ್ದಾರೆ.

ಕೊರೊನಾ ನಿಯಮಗಳು ಬೇಕಾಬಿಟ್ಟಿಯಾಗಿ ಉಲ್ಲಂಘನೆಯಾಗುತ್ತಿರುವ ಹಿನ್ನೆಲೆಯಲ್ಲಿ ಪಾದಯಾತ್ರೆ ಬಗ್ಗೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿತ್ತು ಹಾಗೂ ಕ್ರಮ ಕೈಗೊಳ್ಳದಿರುವ ಬಗ್ಗೆ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತ್ತು. ಇದರ ಬೆನ್ನಲ್ಲೇ ರಾಜ್ಯ ಸರ್ಕಾರ ಕಾಂಗ್ರೆಸ್ ನಾಯಕರ ಪಾದಯಾತ್ರೆಗೆ ನಿರ್ಬಂಧ ಹೇರಿ ಆದೇಶ ನೀಡಿತ್ತು. ಹಾಗೂ ಪಾದಯಾತ್ರೆ ನಿಲ್ಲಿಸುವಂತೆ ರಾಮನಗರ ಎಸ್‌ಪಿ ಮತ್ತು ಜಿಲ್ಲಾಧಿಕಾರಿಗೆ ಸೂಚನೆ ನೀಡಿದೆ.

Edited By : Nagaraj Tulugeri
PublicNext

PublicNext

12/01/2022 10:23 pm

Cinque Terre

48.49 K

Cinque Terre

5

ಸಂಬಂಧಿತ ಸುದ್ದಿ