ನವದೆಹಲಿ : ದೇಶದಲ್ಲಿ ಕೋವಿಡ್ -19 ಮತ್ತು ಒಮಿಕ್ರಾನ್ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಎಲ್ಲಾ ರಾಜ್ಯಗಳ ಸಿಎಂ ಗಳ ಜೊತೆ ಪ್ರಧಾನಿ ನರೇಂದ್ರ ಮೋದಿ ಸಭೆ ನಡೆಸಿದ್ದಾರೆ.
ಮುಖ್ಯಮಂತ್ರಿಗಳ ಸಭೆಯಲ್ಲಿ ಕೊರೊನಾ ಸೋಂಕು ಯಾವ್ಯಾವ ರಾಜ್ಯಗಳಲ್ಲಿ ಯಾವ ಪ್ರಮಾಣದಲ್ಲಿದೆ? ಸೋಂಕು ತಡೆಯಲು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳಿಂದ ಏನೇನು ಕ್ರಮಗಳನ್ನು ಕೈಗೊಳ್ಳಲಾಗಿದೆ? ದಿನದ ಮತ್ತು ವಾರದ ಪಾಸಿಟಿವ್ ರೇಟ್ ಹೇಗಿದೆ? ಸೋಂಕಿನಿಂದ ಸಾಯುವವರ ಪ್ರಮಾಣ ಹೇಗಿದೆ? ಕೊರೋನಾ ಅಲ್ಲದೆ ಒಮಿಕ್ರಾನ್ ಸೋಂಕು ಹರಡುವಿಕೆ ಪ್ರಮಾಣ ಹೇಗಿದೆ? ಕೊರೊನಾ ಮತ್ತು ಒಮಿಕ್ರಾನ್ ಸೋಂಕು ಹರಡುವಿಕೆ ತಡೆಯಲು ಮುಂದೆ ಕೈಗೊಳ್ಳಬೇಕಾದ ಅಗತ್ಯ ಕ್ರಮಗಳು ಯಾವುವು ಎಂಬ ವಿಷಯಗಳ ಬಗ್ಗೆ ಸಮಗ್ರವಾದ ಸಮಾಲೋಚನೆ ನಡೆಯಲಿದೆ.
ಇದೇ ವೇಳೆ ಮುಖ್ಯಮಂತ್ರಿಗಳಿಂದ ರಾಜ್ಯಗಳ ಪರಿಸ್ಥಿತಿ ಮತ್ತು ಅವು ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತದೆ ಎಂದು ತಿಳಿದುಬಂದಿದೆ.
PublicNext
13/01/2022 05:09 pm