ಲಕ್ನೋ: ಉತ್ತರ ಪ್ರದೇಶ ಚುನಾವಣೆಗೆ ದಿನಗಣನೆ ಶುರುವಾಗಿದ್ದು, ಎಲ್ಲಾ ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನು ಘೋಷಿಸುತ್ತಿವೆ. ಆದರೆ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಕಾರ್ಯಕರ್ತರೊಬ್ಬರು ಬಿಕ್ಕಿ ಬಿಕ್ಕಿ ಅತ್ತಿದ್ದಾರೆ.
ಚುನಾವಣೆಯಲ್ಲಿ ಸ್ಪರ್ಧಿಸುವ ಆಸೆ ಇಟ್ಟುಕೊಂಡಿದ್ದ ಬಿಎಸ್‌ಪಿ ಕಾರ್ಯಕರ್ತ ಅರ್ಷದ್ ರಾಣಾ ಅವರು, 'ಎಲ್ಲಾ ಭರವಸೆ ನೀಡಿ ಕೊನೆ ಕ್ಷಣದಲ್ಲಿ ನನಗೆ ಟಿಕೆಟ್ ನೀಡಿಲ್ಲ. ಹೀಗೆ ಆಗುತ್ತದೆ ಅಂತ ನಾನು ಯೋಚನೆ ಕೂಡ ಮಾಡಿರಲಿಲ್ಲ' ಎಂದು ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
PublicNext
14/01/2022 06:50 pm