ಲಕ್ನೋ: ಉತ್ತರ ಪ್ರದೇಶದಲ್ಲಿ ಚುನಾವಣೆ ಘೋಷಣೆಯಾದ ಬೆನ್ನಲ್ಲಿಯೇ ರಾಜ್ಯದಲ್ಲಿ ರಾಜಕೀಯ ಮೇಲಾಟಗಳು ಗರಿಗೆದರಿವೆ. ಸದ್ಯದ ಬೆಳವಣಿಗೆಯಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಯಾವ ಕ್ಷೇತ್ರದಿಂದ ಸ್ಪರ್ಧೆ ಮಾಡಲಿದ್ದಾರೆ ಎಂಬ ವಿಚಾರ ರಿವೀಲ್ ಆಗಿದೆ.
ಈ ಸಂಬಂಧ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬಿಜೆಪಿ ನಾಯಕ, ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಗೋರಖ್‌ಪುರ ಕ್ಷೇತ್ರದಿಂದ ಹಾಗೂ ಉಪ ಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರು ಪ್ರಯಾಗ್‌ರಾಜ್ ಜಿಲ್ಲೆಯ ಸಿರತುದಿಂದ ಸ್ಪರ್ಧಿಸಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಇನ್ನು ಉತ್ತರ ಪ್ರದೇಶದ ವಿಧಾನಸಭೆ ಚುನಾವಣೆಗೆ ಮೊದಲ ಹಂತದಲ್ಲಿ 57-58 ಮತ್ತು ಎರಡನೇ ಹಂತದಲ್ಲಿ 38-55 ಸ್ಥಾನಗಳ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡುತ್ತಿದ್ದೇವೆ ಎಂದು ತಿಳಿಸಿದ್ದಾರೆ.
PublicNext
15/01/2022 01:27 pm