ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚುನಾವಣೆ ಮುಂದೂಡುವಂತೆ ಆಯೋಗಕ್ಕೆ ಪಂಜಾಬ್ ಸಿಎಂ ಮನವಿ

ಚಂಡೀಗಢ: ಪಂಜಾಬ್ ವಿಧಾನಸಭಾ ಚುನಾವಣೆಯನ್ನು ಕನಿಷ್ಠ ಆರು ದಿನಗಳವರೆಗೆ ಮುಂದೂಡಬೇಕೆಂದು ಕೋರಿ ಮುಖ್ಯಮಂತ್ರಿ ಚರಣ್‌ಜಿತ್ ಸಿಂಗ್ ಚನ್ನಿ, ಮುಖ್ಯ ಚುನಾವಣಾ ಆಯುಕ್ತ ಸುಶೀಲ್ ಚಂದ್ರ ಅವರಿಗೆ ಬರೆದಿದ್ದಾರೆ. ಗುರು ರವಿದಾಸ್ ಜಯಂತಿ ಹಿನ್ನೆಲೆಯಲ್ಲಿ ಚನ್ನಿ ಅವರು ಈ ಮನವಿ ಮಾಡಿಕೊಂಡಿದ್ದಾರೆ.

ಗುರು ರವಿದಾಸ್ ಅವರ ಜನ್ಮ ದಿನಾಚರಣೆಯ ಸಂದರ್ಭ, ಫೆ. 10ರಿಂದ 16ರವರೆಗಿನ ಅವಧಿಯಲ್ಲಿ ಸುಮಾರು 20 ಲಕ್ಷದಷ್ಟು ಸಂಖ್ಯೆಯ ಜನರು ಉತ್ತರ ಪ್ರದೇಶದ ಬನಾರಸ್‌ಗೆ ತೆರಳುತ್ತಾರೆ. ಇದರಿಂದ ಅವರು ಮತದಾನದಿಂದ ವಂಚಿತರಾಗುತ್ತಾರೆ. ಹೀಗಾಗಿ ಅವರಿಗೂ ಮತದಾನದ ಅವಕಾಶ ಕಲ್ಪಿಸುವ ಸಲುವಾಗಿ ಚುನಾವಣೆಯನ್ನು ಮುಂದೂಡಬೇಕು ಎಂದಿ ಚನ್ನಿ ಕೇಳಿಕೊಂಡಿದ್ದಾರೆ.

ಪಂಜಾಬ್‌ನ 117 ವಿಧಾನಸಭಾ ಸ್ಥಾನಗಳಿಗೆ ಫೆಬ್ರುವರಿ 14ರಂದು ಮತದಾನ ನಡೆಯಲಿದ್ದು, ಮಾರ್ಚ್ 10ರಂದು ಮತ ಎಣಿಕೆ ನಡೆಯಲಿದೆ.

Edited By : Vijay Kumar
PublicNext

PublicNext

16/01/2022 09:26 am

Cinque Terre

43.36 K

Cinque Terre

2