ತುಮಕೂರು: ಕಳೆದ ಕೆಲ ದಿನಗಳಿಂದ ಗೌಣವಾಗಿದ್ದ ಕಾಮಗಾರಿಗಳಲ್ಲಿನ ಕಮಿಷನ್ ದಂಧೆ ವಿಚಾರ ಈಗ ಮತ್ತೆ ಮುನ್ನೆಲೆಗೆ ಬಂದಿದೆ. ಈ ಬಗ್ಗೆ ತುಮಕೂರು ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ. ಕೆಂಪಣ್ಣ, 'ಸಾರ್ವಜನಿಕ ಕಾಮಗಾರಿಗಳಲ್ಲಿ ಶೇ 40ರಷ್ಟು ಕಮಿಷನ್ ಪಡೆದಿರುವ ಆರೋಪಕ್ಕೆ ಸಂಬಂಧಿಸಿದ ಸಾಕ್ಷ್ಯಾಧಾರಗಳನ್ನು ಬಿಡುಗಡೆ ಮಾಡಿದರೆ ಅದು ಬಸವರಾಜ ಬೊಮ್ಮಾಯಿ ನೇತೃತ್ವದ ಕರ್ನಾಟಕದ ಬಿಜೆಪಿ ಸರ್ಕಾರದ ಮರಣಶಾಸನವನ್ನು ಸಾಬೀತುಪಡಿಸುತ್ತದೆ' ಎಂದಿದ್ದಾರೆ.
ಈ ದಾಖಲೆಗಳಿಂದ ‘ಪಿಡಬ್ಲ್ಯುಡಿ, ನೀರಾವರಿ ಸೇರಿದಂತೆ ವಿವಿಧ ಇಲಾಖೆಗಳ ನಾಲ್ವರು ಮುಖ್ಯ ಎಂಜಿನಿಯರ್‌ಗಳು ಕೆಲಸ ಕಳೆದುಕೊಳ್ಳುವ ಸಾಧ್ಯತೆಯಿದೆ ಮತ್ತು ಇದರಲ್ಲಿ ಭಾಗಿಯಾಗಿರುವ 25ಕ್ಕೂ ಹೆಚ್ಚು ಶಾಸಕರ ಹೆಸರನ್ನು ಬಹಿರಂಗಪಡಿಸಲಾಗುವುದು ಎಂದಿದ್ದಾರೆ. ಕೋವಿಡ್ -19 ಪರಿಸ್ಥಿತಿಯಿಂದಾಗಿ ಬೆಂಗಳೂರಿನಲ್ಲಿ ಯೋಜಿಸಿದ್ದ ಸಾರ್ವಜನಿಕ ರ್‍ಯಾಲಿಯನ್ನು ಮುಂದೂಡಬೇಕಾಗಿ ಬಂತು. ಸಂಘವು ಮುಂದಿನ ವಾರ ರಾಜ್ಯದ ಗುತ್ತಿಗೆದಾರರು ಮುಖ್ಯಮಂತ್ರಿಗೆ ಪತ್ರ ಚಳವಳಿ ಹಮ್ಮಿಕೊಳ್ಳಲಿದೆ ಎಂದು ಕೆಂಪಣ್ಣ ತಿಳಿಸಿದ್ದಾರೆ.
PublicNext
16/01/2022 06:35 pm