ಪಣಜಿ: ಗೋವಾ ವಿಧಾನಸಭಾ ಚುನಾವಣೆಯ ಅಭ್ಯರ್ಥಿಗಳ ಪಟ್ಟಿಯನ್ನ ಇದೇ ಜನವರಿ 19 ರಂದು ಬಿಡುಗಡೆ ಮಾಡುವುದಾಗಿ ರಾಜ್ಯದ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ತಿಳಿಸಿದ್ದಾರೆ.
ದೆಹಲಿಯಲ್ಲಿ ಬಿಜೆಪಿ ನಾಯಕರನ್ನ ಭೇಟಿ ಮಾಡಿದ ಬಳಿಕ ಗೋವಾಕ್ಕೆ ಪ್ರಮೋದ್ ಸಾವಂತ್ ವಾಪಾಸ್ ಆಗಿದ್ದಾರೆ. ವಿಮಾನ ನಿಲ್ದಾಣದಲ್ಲಿಯೇ ಮಾಧ್ಯಮಕ್ಕೂ ಪ್ರತಿಕ್ರಿಯೆ ನೀಡಿ, ಚುನಾವಣೆಗೆ ಸಂಬಂಧಿಸಿದಂತೆ ನಾಯಕರ ಜೊತೆಗೆ ಚರ್ಚಿಸಿದ್ದೇನೆ. ಇದೇ ಜನವರಿ-19 ರಂದು ವಿಧಾನಸಭಾ ಚುನಾವಣೆಯ ಅಭ್ಯರ್ಥಿಗಳ ಪಟ್ಟಿಯನ್ನ ಬಿಡುಗಡೆ ಮಾಡುತ್ತೇವೆ ಎಂದು ಹೇಳಿದ್ದಾರೆ.
PublicNext
17/01/2022 04:41 pm