ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಮ್ಯುನಿಸ್ಟ್ ಸರ್ಕಾರದ ಯಡವಟ್ಟಿನಿಂದ ನಾರಾಯಣ ಗುರು ಸ್ತಬ್ಧಚಿತ್ರ ತಿರಸ್ಕಾರ: ಪ್ರಲ್ಹಾದ ಜೋಶಿ

ಹುಬ್ಬಳ್ಳಿ: ಈ ಬಾರಿಯ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಸಮಾಜ ಸುಧಾರಕ ನಾರಾಯಣ ಗುರುಗಳ ಸ್ತಬ್ಧಚಿತ್ರವನ್ನು ಕೇಂದ್ರ ಸರ್ಕಾರ ತಿಸ್ಕರಿಸಿದ್ದು ವಿವಾದಕ್ಕೆ ಕಾರಣವಾಗಿದೆ. ಈ ಬಗ್ಗೆ ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಕೇರಳದ ಕಮ್ಯುನಿಸ್ಟ್ ಸರ್ಕಾರದ ಎಡವಟ್ಟಿನಿಂದ ನಾರಾಯಣ ಗುರುಗಳ ಸ್ತಬ್ಧ ಚಿತ್ರ ತಿರಸ್ಕಾರಗೊಂಡಿದೆ ಎಂದಿದ್ದಾರೆ‌.

ಸರಣಿ ಟ್ವೀಟ್ ಮಾಡಿರುವ ಅವರು, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಬ್ರಹ್ಮಶ್ರೀ ನಾರಾಯಣ ಗುರುಗಳ ಹೆಸರಲ್ಲಿ ವಿನಾಕಾರಣ ವಿವಾದ ಸೃಷ್ಟಿಸುತ್ತಿದ್ದಾರೆ. ಇದು ಖಂಡನೀಯ ಎಂದಿದ್ದಾರೆ.

ಪ್ರತಿ ಗಣರಾಜ್ಯೋತ್ಸವಕ್ಕೆ ದೇಶದ ಪ್ರತಿ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಂದ ಸೇರಿ ಒಟ್ಟು 12 ಸ್ತಬ್ಧ ಚಿತ್ರಗಳನ್ನು ಆಯ್ಕೆ ಮಾಡಲಾಗುತ್ತದೆ. ಕೇಂದ್ರದ ಸ್ತಬ್ಧ ಚಿತ್ರದ ನಿಯಮಾವಳಿ ಹಾಗೂ ಮಾರ್ಗದರ್ಶಿಯನ್ನು ಕೇರಳ ಸರ್ಕಾರ ಸರಿಯಾಗಿ ಪಾಲಿಸದ ಕಾರಣವಾಗಿ ಕೇರಳದ ಸ್ತಬ್ಧ ಚಿತ್ರ ಆಯ್ಕೆಯಾಗಿಲ್ಲ‌. ಈ ಹಿಂದೆ 2018 ಮತ್ತು 2021ರಲ್ಲಿ ಕೇರಳದ ಸ್ತಬ್ಧ ಚಿತ್ರಗಳು ಆಯ್ಕೆಯಾಗಿದ್ದವು ಎಂದು ಪ್ರಲ್ಹಾದ್ ಜೋಶಿ ಸ್ಪಷ್ಟನೆ ನೀಡಿದ್ದಾರೆ.

Edited By : Nagaraj Tulugeri
PublicNext

PublicNext

18/01/2022 08:17 am

Cinque Terre

57.24 K

Cinque Terre

19

ಸಂಬಂಧಿತ ಸುದ್ದಿ