ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪ್ರಧಾನಿ ಮೋದಿ ರಾಮ ಮತ್ತು ಕೃಷ್ಣನ ಅವತಾರ: ಮಧ್ಯಪ್ರದೇಶ ಕೃಷಿ ಸಚಿವ

ಭೋಪಾಲ್: ಪ್ರಧಾನಿ ನರೇಂದ್ರ ಮೋದಿ ಅವರು ರಾಮ ಮತ್ತು ಕೃಷ್ಣರಂತೆ ದೇವರ ಅವತಾರ ಎಂದು ಮಧ್ಯ ಪ್ರದೇಶದ ಕೃಷಿ ಸಚಿವ ಹಾಗೂ ಬಿಜೆಪಿ ನಾಯಕ ಕಮಲ್ ಪಟೇಲ್ ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ಭಾರತ ವಿಶ್ವಗುರುವಾಗುತ್ತಿದೆ. ಇಷ್ಟೊಂದು ಜನರ ಕಲ್ಯಾಣ ಓರ್ವ ಜನಸಾಮಾನ್ಯನಿಂದ ಸಾಧ್ಯವಿಲ್ಲ. ಕಾಂಗ್ರೆಸ್ ಪಕ್ಷ ಸೃಷ್ಟಿಸಿರುವ ಭ್ರಷ್ಟಾಚಾರ ಮತ್ತು ಅನಾಚಾರಗಳನ್ನು ತೊಲಗಿಸಲು ಪ್ರಧಾನಿ ಮೋದಿ ಅವತಾರವೆತ್ತಿ ಬಂದಿದ್ದಾರೆ. ಭ್ರಷ್ಟಾಚಾರ ಕೊನೆಯಾಗುತ್ತಿದೆ. ಹೀಗಾಗಿ ಪ್ರಧಾನಿ ಮೋದಿ ಅವರು ಅವತಾರ ತಾಳಿದ್ದಾರೆ ಎಂದು ಹೇಳಿದ್ದಾರೆ.

ಭೂಮಿಯಲ್ಲಿ ಅನ್ಯಾಯ ಉಂಟಾದಾಗ, ರಾಮ ದೇವರು ಅವತಾರ ತಾಳಿ ಬಂದಿದ್ದರು. ರಾಕ್ಷಸ ಸಂಹಾರ ಮಾಡಿ ರಾಮರಾಜ್ಯ ಸ್ಥಾಪಿಸಿದ್ದರು. ಕಂಸನ ದೌರ್ಜನ್ಯಗಳು ಹೆಚ್ಚಾದಾಗ, ಶ್ರೀಕೃಷ್ಣನು ಜನ್ಮ ತಳೆದು ಅವನ ಕ್ರೌರ್ಯವನ್ನು ಕೊನೆಗೊಳಿಸಿದನು. ಅದೇ ಮಾದರಿಯಲ್ಲಿ ಈಗ ಪ್ರಧಾನಿ ನರೇಂದ್ರ ಮೋದಿ ಜನ್ಮತಾಳಿದ್ದಾರೆ. ದೇಶದಲ್ಲಿ ನಡೆಯುತ್ತಿರುವ ಎಲ್ಲ ಭ್ರಷ್ಟಾಚಾರ, ಅನಾಚಾರವನ್ನು ಕೊನೆಗೊಳಿಸಲಿದ್ದಾರೆ ಎಂದು ಕಮಲ್ ಪಟೇಲ್ ಹೇಳಿದ್ದಾರೆ.

Edited By : Nagaraj Tulugeri
PublicNext

PublicNext

19/01/2022 07:46 am

Cinque Terre

69.15 K

Cinque Terre

46

ಸಂಬಂಧಿತ ಸುದ್ದಿ