ಲಖನೌ: ಉತ್ತರ ಪ್ರದೇಶದಲ್ಲಿ ಚುನಾವಣೆ ಹತ್ತಿರ ಬರುತ್ತಿದ್ದಂತೆ ಪಕ್ಷಾಂತರ ಪರ್ವ ಆರಂಭವಾಗಿದೆ. ಕೆಲವು ಬಿಜೆಪಿ ಶಾಸಕರು ಸ್ವಪಕ್ಷವನ್ನು ಬಿಟ್ಟು ಬೇರೆ ಬೇರೆ ಪಕ್ಷಗಳಿಗೆ ಸೇರ್ಪಡೆಯಾಗಿದ್ದರು. ಇದರ ಬೆನ್ನಲ್ಲೇ ಸಮಾಜವಾದಿ ಪಕ್ಷದ ನಾಯಕ ಮುಲಾಯಂ ಸಿಂಗ್ ಯಾದವ್ ಅವರ ಕಿರಿಯ ಸೊಸೆ ಅಪರ್ಣಾ ಯಾದವ್ ಬಿಜೆಪಿ ಸೇರಿಕೊಂಡಿದ್ದಾರೆ.
ಅಪರ್ಣಾ ಯಾದವ್ ಅವರು ಉತ್ತರ ಪ್ರದೇಶದ ಮಾಜಿ ಸಿಎಂ ಅಖಿಲೇಶ್ ಅವರ ಸಹೋದರ ಪ್ರತೀಕ್ ಅವರ ಪತ್ನಿ. ಬಿಜೆಪಿ ಸೇರ್ಪಡೆಗೊಂಡು ಮಾತನಾಡಿದ ಅಪರ್ಣಾ, ನನಗೆ ರಾಷ್ಟ್ರೀಯತೆಯೇ ಮೊದಲು. ಪ್ರಧಾನಿ ಮೋದಿಯವರ ಕೆಲಸವನ್ನು ನಾನು ಮೆಚ್ಚುತ್ತೇನೆ. ಬಿಜೆಪಿಗೆ ಕೃತಜ್ಞಳಾಗಿದ್ದೇನೆ ಎಂದಿದ್ದಾರೆ.
PublicNext
19/01/2022 12:48 pm