ನವದೆಹಲಿ: ದಿವಂಗತ ರಕ್ಷಣಾ ಪಡೆ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅವರ ಕಿರಿಯ ಸಹೋದರ ನಿವೃತ್ತ ಕರ್ನಲ್ ವಿಜಯ್ ರಾವತ್ ಅವರು ಬಿಜೆಪಿ ಸೇರ್ಪಡೆಯಾಗಿದ್ದಾರೆ.
ಉತ್ತರಾಖಂಡ ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ಈ ಬೆಳವಣಿಗೆ ಭಾರೀ ಚರ್ಚೆಗೆ ಕಾರಣವಾಗಿದೆ. ನಿವೃತ್ತ ಕರ್ನಲ್ ವಿಜಯ್ ರಾವತ್ ಅವರು ದೆಹಲಿಯಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬಳಿಕ ಮಾತನಾಡಿದ ಅವರು, ಬಿಜೆಪಿಗೆ ಸೇರಲು ಅವಕಾಶ ನೀಡಿದ್ದಕ್ಕಾಗಿ ಕೃತಜ್ಞನಾಗಿದ್ದೇನೆ. ನಿವೃತ್ತಿಯ ನಂತರ ನನ್ನ ತಂದೆ ಬಿಜೆಪಿಯಲ್ಲಿದ್ದರು ಮತ್ತು ಈಗ ನನಗೆ ಅವಕಾಶ ಸಿಕ್ಕಿದೆ" ಎಂದು ಹೇಳಿದ್ದಾರೆ.
PublicNext
19/01/2022 06:33 pm