ಲಖನೌ: ಉತ್ತರಪ್ರದೇಶದಲ್ಲಿ ಚುನಾವಣಾ ಕಾವು ಹೆಚ್ಚಾಗುತ್ತಿದೆ. ಈ ನಡುವೆ ಆ ಪಕ್ಷದಿಂದ ಈ ಪಕ್ಷಕ್ಕೆ, ಈ ಪಕ್ಷದಿಂದ ಆ ಪಕ್ಷಕ್ಕೆ ಹಾರಿಕೊಳ್ಳುವವರ ಸಂಖ್ಯೆಯೂ ಹೆಚ್ಚಾಗುತ್ತಿದೆ. ನಿನ್ನೆ ಮುಲಾಯಂ ಸಿಂಗ್ ಯಾದವ್ ಅವರ ಸೊಸೆ ಅಪರ್ಣಾ ಬಿಜೆಪಿ ಸೇರ್ಪಡೆಯಾಗಿದ್ದರು.
ಇದರ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದ ಮಾಜಿ ನಾಯಕಿ ಹಾಗೂ ವೃತ್ತಿಯಲ್ಲಿ ವೈದ್ಯೆ ಆಗಿರುವ ಪ್ರಿಯಾಂಕಾ ಮೌರ್ಯ ಇಂದು ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಇವರೊಂದಿಗೆ ಸಮಾಜವಾದಿ ಶಾಸಕ ಪ್ರಮೋದ್ ಗುಪ್ತಾ ಕೂಡ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಈ ಮೂಲಕ ಮಾಜಿ ಸಿಎಂ ಹಾಗೂ ಸಮಾಜವಾದಿ ನೇತಾರ ಅಖಿಲೇಶ್ ಯಾದವ್‌ಗೆ ಮತ್ತೊಂದು ಹಿನ್ನೆಡೆಯಾದಂತಾಗಿದೆ.
ಬಿಜೆಪಿ ಸೇರಿದ ನಂತರ ಮಾತನಾಡಿದ ಪ್ರಿಯಾಂಕಾ ಮೌರ್ಯ, ಕಾಂಗ್ರೆಸ್‌ನಲ್ಲಿ ನಾನು ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ. ಆದರೆ ಅಲ್ಲಿ ನನಗೆ ಉತ್ತಮ ಸ್ಥಾನ ಸಿಕ್ಕಿಲ್ಲ. ಸದ್ಯ ಸಮಾಜ ಸೇವೆ ಮಾಡುವ ಉದ್ದೇಶದಿಂದ ಬಿಜೆಪಿ ಸೇರಿದ್ದೇನೆ ಎಂದಿದ್ದಾರೆ.
PublicNext
20/01/2022 04:35 pm