ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಮೇಶ್ ಜಾರಕಿಹೊಳಿ ಮೇಲೆ ಹೆಬ್ಬಾಳ್ಕರ್ ಗಂಭೀರ ಆರೋಪ: ಏನದು?

ಬೆಳಗಾವಿ: ರಮೇಶ್ ಜಾರಕಿಹೊಳಿ ನೀರಾವರಿ ಸಚಿವರಾದ ತಕ್ಷಣವೇ ಬೆಳಗಾವಿ ಗ್ರಾಮೀಣ ಕ್ಷೇತ್ರಕ್ಕೆ ಮಂಜೂರಾದ ಎಲ್ಲ ಅನುದಾನವನ್ನು ತಡೆಹಿಡಿದಿದ್ದರು. ವರ್ಕ್ ಆರ್ಡರ್ ಆಗಿ ಟೆಂಡರ್ ಆದ ಅನುದಾನ ನಿಲ್ಲಿಸಿದರು. ಇದಕ್ಕೆ ಇಂಜಿನಿಯರ್ ಹಾಗೂ ಅಧಿಕಾರಿಗಳೇ ಸಾಕ್ಷಿ ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್, ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮೇಲೆ ಗಂಭೀರ ಆರೋಪ ಮಾಡಿದ್ದಾರೆ.

ಬೆಳಗಾವಿ ತಾಲೂಕಿನ ಮಾವಿನಕಟ್ಟಿ ಗ್ರಾಮದಲ್ಲಿ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು ನಾಲ್ಕೂವರೆ ಕೋಟಿ ರೂಪಾಯಿಯ ಪ್ಯಾಕೇಜ್ ಇದು. ಎರಡು ವರ್ಷಗಳ ಹಿಂದೆಯೇ ನಾಲ್ಕೂವರೆ ಕೋಟಿ ರೂಪಾಯಿ ಟೆಂಡರ್ ಆಗಿ ವರ್ಕ್ ಆರ್ಡರ್ ಆಗಿತ್ತು. ಆದರೆ ದುರ್ದೈವದಿಂದ ಮೈತ್ರಿ ಸರ್ಕಾರ ಪತನವಾಯಿತು. ಬಳಿಕ ರಮೇಶ್ ಜಾರಕಿಹೊಳಿ ನೀರಾವರಿ ಸಚಿವರಾದರು. ರಮೇಶ್ ಜಾರಕಿಹೊಳಿ ನೀರಾವರಿ ಸಚಿವರಾದ ಆದ ತಕ್ಷಣವೇ ಬೆಳಗಾವಿ ಗ್ರಾಮೀಣ ಕ್ಷೇತ್ರಕ್ಕೆ ಮಂಜೂರಾದ ಎಲ್ಲ ಅನುದಾನವನ್ನು ತಡೆಹಿಡಿದರು ಇದಕ್ಕೆ ಇಂಜಿನಿಯರ್ ಸಾಕ್ಷಿ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಮುಂದು ವರೆದು ಮಾತನಾಡಿದ ಅವರು ಇಂಜಿನಿಯರ್​ಗಳು ಸರ್ಕಾರಿ ನೌಕರರಾಗಿರುವ ಕಾರಣಕ್ಕೆ ಮಾತನಾಡಲು ಬರುವುದಿಲ್ಲ. 15 ದಿನಗಳ ಹಿಂದೆಯೇ ಸಿಎಂ ಬಸವರಾಜ ಬೊಮ್ಮಾಯಿ ಸಾಹೇಬ್ರಿಗೆ ಮನವಿ ಮಾಡಿಕೊಂಡ ಮೇಲೆ ನಮಗೆ ಅನುಕೂಲ ಮಾಡಿಕೊಟ್ಟಿದ್ದಾರೆ. ಅದಕ್ಕಾಗಿ ಈ ರಸ್ತೆ ಮಾಡುತ್ತಿದ್ದೇವೆ. ಮಾವಿನಕಟ್ಟಿ ಗ್ರಾಮದ ಮಗಳಾಗಿ ನಾನು ಹೇಳಿದ ಕೆಲಸ ಮಾಡಿದ್ದೇನೆ ಎಂದರು.

Edited By : Nagaraj Tulugeri
PublicNext

PublicNext

20/01/2022 09:44 pm

Cinque Terre

37.38 K

Cinque Terre

2