ನವದೆಹಲಿ: ಅಭಿವೃದ್ಧಿಶೀಲ ಭಾರತದ ಜಾಗತಿಕ ವರ್ಚಸ್ಸಿಗೆ ಮಸಿ ಬಳಿಯಲು ಹುನ್ನಾರ ನಡೆಯುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತ ಹೆಸರಿಗೆ ಕಳಂಕ ತರುವ ಕೆಲಸಗಳು ನಡೆಯುತ್ತಿರುವುದನ್ನು ನಾವು ಗಮನಿಸಿದ್ದೇವೆ ಅದು ರಾಜಕಾರಣದ ಭಾಗ ಎಂದು ಸುಮ್ಮನಿರಲು ಸಾಧ್ಯವಿಲ್ಲ. ಅದು ದೇಶದ ಗೌರವದ ಪ್ರಶ್ನೆ ಎಂದಿದ್ದಾರೆ.
ಬ್ರಹ್ಮಕುಮಾರಿ ಸಂಘ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಭಾರತದ ವಿರುದ್ಧ ಹರಡುತ್ತಿರುವ ಅಪಪ್ರಚಾರವನ್ನು ತಡೆಗಟ್ಟುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯ. ನಮ್ಮ ದೇಶದ ಬಗ್ಗೆ ಸರಿಯಾದ ಸಂದೇಶವನ್ನು ಜಗತ್ತಿಗೆ ಪ್ರಚಾರ ಮಾಡುವುದು ನಮ್ಮೆಲ್ಲರ ಹೊಣೆ ಎಂದು ಹೇಳಿದ್ದಾರೆ.
PublicNext
21/01/2022 08:23 am