ಲಖನೌ: ದೇಶದಲ್ಲಿ ಪಂಚರಾಜ್ಯಗಳ ಚುನಾವಣಾ ಕಾವು ದಿನೇದಿನೇ ಹೆಚ್ಚಾಗುತ್ತಿದೆ. ಕೆಲವು ನಾಯಕರ ರೋಚಕ ನಡೆ ನಿಗೂಢವಾಗಿದೆ. ಚುನಾವಣೆಗೆ ಇನ್ನೇನು ಒಂದೇ ತಿಂಗಳು ಬಾಕಿ ಇರುವಾಗಲೇ ಯಾರಾಗ್ತಾರೆ ಮುಂದಿನ ಸಿಎಂ ಎಂಬ ಬಗ್ಗೆ ಬಿಸಿಬಿಸಿ ಚರ್ಚೆಗಳು ಶುರುವಾಗಿವೆ. ಇದೆಲ್ಲದರ ನಡುವೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅತಿಹೆಚ್ಚು ಬೆಂಬಲ ಪಡೆದುಕೊಳ್ಳುವ ಮೂಲಕ ಸುದ್ದಿ ಮಾಡಿದ್ದಾರೆ.
ಟುಡೆಯ ಮೂಡ್ ಆಫ್ ದಿ ನೇಷನ್ ಸಮೀಕ್ಷೆಯಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ಗೆ ಶೇ.49ರಷ್ಟು ಜನರು ಬೆಂಬಲ ವ್ಯಕ್ತಪಡಿಸಿದ್ದಾರೆ. ಉತ್ತರ ಪ್ರದೇಶದಲ್ಲಿ ಫೆಬ್ರವರಿ 10, ಫೆಬ್ರವರಿ 14, ಫೆಬ್ರವರಿ 20, ಫೆಬ್ರವರಿ 23, ಫೆಬ್ರವರಿ 27, ಮಾರ್ಚ್ 3 ಮತ್ತು ಮಾರ್ಚ್ 7ರಂದು ಒಟ್ಟು ಏಳು ಹಂತಗಳಲ್ಲಿ ಮತದಾನ ನಡೆಯಲಿದೆ.
ಕಳೆದ 2017ರಲ್ಲಿ ಉತ್ತರ ಪ್ರದೇಶದಲ್ಲಿ 403 ವಿಧಾನಸಭೆಗಳಿಗೆ ನಡೆದ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಅತಿಹೆಚ್ಚು ಸ್ಥಾನಗಳನ್ನು ಗೆದ್ದು ಅಧಿಕಾರದ ಗದ್ದುಗೆ ಏರಿತ್ತು. ಒಟ್ಟು 403 ಕ್ಷೇತ್ರಗಳ ಪೈಕಿ ಬಿಜೆಪಿ 312 ಸ್ಥಾನಗಳನ್ನು ಗೆದ್ದಿತ್ತು. ಸಮಾಜವಾದಿ ಪಕ್ಷ 47 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದರೆ, ಬಹುಜನ ಸಮಾಜವಾದಿ ಪಕ್ಷವು 19 ಕ್ಷೇತ್ರಗಳಲ್ಲಿ ಗೆಲುವಿನ ಬಾವುಟ ಹಾರಿಸಿತ್ತು. ರಾಷ್ಟ್ರೀಯ ಪಕ್ಷ ಕಾಂಗ್ರೆಸ್ ತೀವ್ರ ಹಿನ್ನಡೆ ಅನುಭವಿಸಿದ್ದು, ಕೇವಲ ಏಳು ಕ್ಷೇತ್ರಗಳಲ್ಲಿ ಮಾತ್ರ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿತ್ತು.
PublicNext
21/01/2022 01:52 pm