ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಟಿಪ್ಪು ಬೆಂಬಲಿಗರಿಂದ ನಾರಾಯಣ ಗುರುಗಳಿಗೆ ಅವಮಾನ: ಸಚಿವ ಸುನಿಲ್‌ಕುಮಾರ್

ಬೆಂಗಳೂರು: ಸಿದ್ದರಾಮಯ್ಯ ಸಿಎಂ ಆಗಿದ್ದ ವೇಳೆ ಟಿಪ್ಪು ಸುಲ್ತಾನ್ ಸ್ತಬ್ಧಚಿತ್ರವನ್ನು ಗಣರಾಜ್ಯೋತ್ಸವ ಪರೇಡ್‌ಗೆ ಶಿಫಾರಸ್ಸು ಮಾಡಿದ್ದರು. ಈಗ ನಾರಾಯಣಗುರುಗಳ ಹೆಸರಿಟ್ಟುಕೊಂಡು ರಾಜಕೀಯ ಮಾಡ್ತಿದ್ದಾರೆ ಎಂದು ಸಚಿವ ವಿ.ಸುನಿಲ್‌ಕುಮಾರ್ ಆರೋಪಿಸಿದ್ದಾರೆ.

ಸಿದ್ದರಾಮಯ್ಯ ಅವರು ಕೇರಳದ ಕಮ್ಯುನಿಸ್ಟ್ ಸರ್ಕಾರ ಹಚ್ಚಿದ ಬೆಂಕಿಯಲ್ಲಿ ಮೈ ಕಾಯಿಸಿಕೊಳ್ಳಲು ಹೊರಟಿದ್ದಾರೆ. ನಾರಾಯಣ ಗುರು ರಾಜಕೀಯ ವಸ್ತುವಲ್ಲ. ಅವರನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ಒಪ್ಪಿತವಲ್ಲ. ಸಿದ್ದರಾಮಯ್ಯರ ತಮ್ಮ ಬಿಡುವಿನ ವೇಳೆಯನ್ನು ಸತ್ಕಾರ್ಯಕ್ಕೆ ಬಳಸಿಕೊಳ್ಳುವ ಬದಲು ಎಲ್ಲದರಲ್ಲೂ ರಾಜಕೀಯ ಮಾಡುತ್ತಿದ್ದಾರೆ. ಟಿಪ್ಪು ಆದರ್ಶ ಪ್ರತಿಪಾದಕರು ನಾರಾಯಣ ಗುರುಗಳಿಗೆ ಅಪಮಾನ ಮಾಡುತ್ತಿದ್ದಾರೆ ಎಂದು ಸಚಿವರು ಕಿಡಿಕಾರಿದ್ದಾರೆ.

Edited By : Nagaraj Tulugeri
PublicNext

PublicNext

21/01/2022 08:03 pm

Cinque Terre

63.14 K

Cinque Terre

6

ಸಂಬಂಧಿತ ಸುದ್ದಿ