ದೆಹಲಿ:ರಾಜ್ಯದ ಮುಖ್ಯಮಂತ್ರಿ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ದೆಹಲಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿಕೆಯೊಂದನ್ನ ಕೊಟ್ಟಿದ್ದಾರೆ.
ಹೌದು.ಮುಂದಿನ ಚುನಾವಣೆ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿಯೇ ನಡೆಯಲಿದೆ. ಇದರಲ್ಲಿ ಯಾವುದೇ ರೀತಿಯ ಅನುಮಾನವ ಬೇಡವೇ ಬೇಡ ಎಂದು ಕೇಂದ್ರ ಸಚಿವ ಜೋಶಿ ಹೇಳಿದ್ದಾರೆ.
ಸಂಪುಟ ಪುನರ್ ರಚನೆ ಮತ್ತು ವಿಸ್ತರಣೆ ಬಗ್ಗೆ ಯಾವುದೇ ರೀತಿ ಚರ್ಚೆ ನಡೆದೇ ಇಲ್ಲ.ಪಂಚ ರಾಜ್ಯಗಳ ಚುನಾವಣೆ ಮುಗಿದ ಬಳಿಕವೇ ನಾಯಕರು ಕರ್ನಾಟಕದ ಕುರಿತು ಚರ್ಚೆ ನಡೆಸಲಿದ್ದಾರೆ ಎಂದೇ ಪ್ರಹ್ಲಾದ್ ಜೋಶಿ ವಿವರಿಸಿದ್ದಾರೆ.
ಬಿಜೆಪಿ ಸರ್ಕಾರ ಟೇಕಾಫ್ ಆಗಿಲ್ಲ ಅಂತ ಕಾಂಗ್ರೆಸ್ ಆರೋಪಿಸುತ್ತಿದೆ. ಆದರೆ ಕಾಂಗ್ರೆಸ್ ಗಾಗಿ ಸರ್ಕಾರ ಟೇಕಾಫ್ ಆಗುವ ಅವಶ್ಯಕತೇನೆ ಇಲ್ಲ. ಜನರಿಗೆ ಟೇಕಾಫ್ ಆದ್ರೆ ಸಾಕು ಅಂತಲೇ ತಿರುಗೇಟು ಕೊಟ್ಟಿದ್ದಾರೆ ಪ್ರಹ್ಲಾದ್ ಜೋಶಿ.
PublicNext
21/01/2022 10:34 pm