ಲಕ್ನೋ: ಉತ್ತರ ಪ್ರದೇಶದ ಉಪ ಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ತಮ್ಮ ವಿಧಾನಸಭಾ ಕ್ಷೇತ್ರವಾದ ಸಿರಥುದಲ್ಲಿ ಪ್ರಚಾರಕ್ಕೆ ಹೋದಾಗ ಸ್ಥಳೀಯರಿಂದ ವಿರೋಧ ಎದುರಿಸಿದ್ದಾರೆ. ಶನಿವಾರ ನಡೆದ ಈ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.
ಸ್ಥಳೀಯ ಸುದ್ದಿ ಮಾಧ್ಯಮಗಳ ವರದಿಗಳ ಪ್ರಕಾರ, ಕೇಶವ್ ಪ್ರಸಾದ್ ಮೌರ್ಯ ಸಿರಥು ಕ್ಷೇತ್ರದಿಂದ ಅಭ್ಯರ್ಥಿಯಾಗಿ ಘೋಷಿಸಲ್ಪಟ್ಟ ನಂತರ ಮೊದಲ ಬಾರಿಗೆ ತಮ್ಮ ಕ್ಷೇತ್ರಕ್ಕೆ ಭೇಟಿ ನೀಡಿದ್ದರು. ಸಿರಥು ವಿಧಾನಸಭಾ ಕ್ಷೇತ್ರದ ಗುಲಾಮಿಪುರ ಗ್ರಾಮದಲ್ಲಿ ಮಹಿಳೆಯರಿಂದ ಪ್ರತಿಭಟನೆ ಎದುರಿಸಿದ್ದಾರೆ. ಸಿರಥುವಿನಲ್ಲಿ ಜಿಲ್ಲಾ ಪಂಚಾಯತ್ ಸದಸ್ಯೆಯ ಪತಿ, ಕೇಶವ್ ಪ್ರಸಾದ್ ಮೌರ್ಯ ಅವರ ಆಪ್ತ ರಾಜೀವ್ ಮೌರ್ಯ ನಾಪತ್ತೆಯಾಗಿದ್ದು, ಈ ವಿಚಾರದಲ್ಲಿ ಪೊಲೀಸರ ನಿರ್ಲಕ್ಷ್ಯದಿಂದ ಮಹಿಳೆಯರು ಕೋಪಗೊಂಡಿದ್ದಾರೆ ಎನ್ನಲಾಗಿದೆ.
ರಾಜೀವ್ ಮೌರ್ಯ ಕಳೆದ ವಾರದಿಂದ ನಾಪತ್ತೆಯಾಗಿದ್ದಾರೆ. ರಾಜೀವ್ ಪತ್ತೆಗೆ ವಿಶೇಷ ತಂಡವನ್ನು ರಚಿಸುವಂತೆ ಉಪಮುಖ್ಯಮಂತ್ರಿ ಪೊಲೀಸರಿಗೆ ಸೂಚನೆ ನೀಡಿದ್ದಾರೆ.
PublicNext
23/01/2022 07:18 pm