ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದಾವಣಗೆರೆ: ಹೊಸಬರಿಗೆ ಸಚಿವ ಸ್ಥಾನ ಕೊಡಿ, ಹಿರಿಯ ಸಚಿವರನ್ನು ಪಕ್ಷದ ಸಂಘಟನೆಗೆ ಬಳಸಿಕೊಳ್ಳಿ: ರೇಣುಕಾಚಾರ್ಯ

ದಾವಣಗೆರೆ: ನಾನು ಸಚಿವ ಸ್ಥಾನ ಆಕಾಂಕ್ಷಿ ಅಲ್ಲ ಎಂಬುದಾಗಿ ಬಹಿರಂಗವಾಗಿ ಎಲ್ಲಿಯೂ ಹೇಳಿಲ್ಲ. ಹೀಗೆ ಹೇಳಿದ ಬಗ್ಗೆ ಸಾಕ್ಷ್ಯ ಕೊಟ್ಟರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ. ನಾಲ್ಕು ಗೋಡೆಗಳ ಮಧ್ಯೆ ಈ ಹಿಂದೆ ಮಾಜಿ ಸಿಎಂ ಯಡಿಯೂರಪ್ಪ ಅವರಿಗೂ ಕೇಳಿದ್ದೆ. ಅದೇ ರೀತಿಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್, ಪಕ್ಷದ ರಾಜ್ಯಾಧ್ಯಕ್ಷರಿಗೂ ನನಗೆ ಸಚಿವ ಸ್ಥಾನ ನೀಡುವಂತೆ ಮನವಿ ಮಾಡಿದ್ದೇನೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ. ಪಿ. ರೇಣುಕಾಚಾರ್ಯ ಹೇಳಿದ್ದಾರೆ.

ಹೊನ್ನಾಳಿ ಪಟ್ಟಣದ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ಕಳೆದ ವಾರ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಸಚಿವ ಸ್ಥಾನ ನೀಡಿ ಅಂತಾ ಕೇಳಿದ್ದು ನಿಜ. ನಮ್ಮ ಪಕ್ಷದಲ್ಲಿ ಯಾವುದೇ ಭಿನ್ನಮತ ಇಲ್ಲ. ಅಭಿಪ್ರಾಯ ಹೇಳೋದಕ್ಕೆ ಅವಕಾಶ ಇದೆ. ನಾನು ಕೇಳಿದ್ದೇನೆ. ಸಚಿವ ಸ್ಥಾನ ಆಕಾಂಕ್ಷಿ ಅಲ್ಲ ಎಂದು ಹೇಳಲು ಆಗದು ಎಂದು ತಿಳಿಸಿದರು‌‌.

ಮಾಧ್ಯಮದ ಮುಂದೆ ಆಕಾಂಕ್ಷಿ ಅಂತಾ ಕೇಳಿದ್ರೆ ಕೊಡ್ತಾರಾ. ಈ ಹಿಂದೆ ಅಬಕಾರಿ ಸಚಿವನಾಗಿಯೂ‌ ಕೆಲಸ ಮಾಡಿದ್ದೇನೆ. ಮೊದಲನೇ, ಎರಡನೇ ಹಾಗೂ ಮೂರನೇ ಕೊರೊನಾ ಅಲೆ ಬಂದರೂ ಕೆಲಸ ಮಾಡಿದ್ದೇನೆ. ಹೊನ್ನಾಳಿ - ನ್ಯಾಮತಿ ತಾಲೂಕಿನಲ್ಲಿ ದೇಶ ಮೆಚ್ಚುವ ರೀತಿ ನಾನು, ಅಧಿಕಾರಿಗಳು, ಕೊರೊನಾ ವಾರಿಯರ್ಸ್ ಎಲ್ಲರೂ ಸೇರಿ ಮಾಡಿದ್ದೇವೆ. ಜನರಿಗೆ ನಾನು ಸಚಿವ ಸ್ಥಾನ ನೀಡಬೇಕೆಂಬ ಅಪೇಕ್ಷೆ ಇದೆ ಎಂದು ಹೇಳಿದರು.

Edited By : Manjunath H D
PublicNext

PublicNext

24/01/2022 01:23 pm

Cinque Terre

41.16 K

Cinque Terre

1

ಸಂಬಂಧಿತ ಸುದ್ದಿ