ದಾವಣಗೆರೆ: ಬಿಜೆಪಿಯ ಯಾವ ಶಾಸಕರು ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆ ಎಂಬ ಹೆಸರು ಮಾತ್ರವಲ್ಲ, ತಾಕತ್ತಿದ್ದರೆ ಪಟ್ಟಿಯನ್ನೇ ಬಿಡುಗಡೆ ಮಾಡಲಿ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ. ಪಿ. ರೇಣುಕಾಚಾರ್ಯ ಹೇಳಿದ್ದಾರೆ.
ಹೊನ್ನಾಳಿಯಲ್ಲಿ ಮಾಧ್ಯಮದವರ ಜೊತೆ ಮಾತಾಡಿದ ಅವರು, ಬಿಜೆಪಿ ಶಾಸಕರು ಕಾಂಗ್ರೆಸ್ ಸೇರಲು ತುದಿಗಾಲ ಮೇಲೆ ನಿಂತಿದ್ದಾರೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯರ ಮಾತಿಗೆ ಈ ರೀತಿ ಪ್ರತಿಕ್ರಿಯೆ ನೀಡಿದ್ದಾರೆ.
ಬಿಜೆಪಿಯ ಎಲ್ಲಾ ಶಾಸಕರು ಒಗ್ಗಟ್ಟಾಗಿದ್ದೇವೆ. 2018ರಲ್ಲಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಯಾಯಿತು. ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಆದ್ರೆ, ಅಭಿಪ್ರಾಯ ವ್ಯಕ್ತಪಡಿಸಲು ಅವಕಾಶ ಇದೆ. ಸಿದ್ದರಾಮಯ್ಯ, ಡಿ. ಕೆ. ಶಿವಕುಮಾರ್ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಎಂಬ ಹಗಲುಕನಸು ಕಾಣುತ್ತಿದ್ದಾರೆ. ಬಿಜೆಪಿಯ ಪ್ರತಿಯೊಬ್ಬ ಶಾಸಕರು ಸಿಂಹದ ಮರಿಗಳಿದ್ದಂತೆ. ಯಾರೂ ಪಕ್ಷ ಬಿಟ್ಟುಹೋಗುವುದಿಲ್ಲ ಎಂದು ಹೇಳಿದ್ದಾರೆ.
PublicNext
25/01/2022 06:44 pm